ಬೆಂಗಳೂರು: ‘ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎನ್ನಲಾದ ಆರೋಪದಡಿ ನಟ ಚೇತನ್ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್ ಕುಮಾರ್ ಶರ್ಮಾ ಎಂಬುವರು ದೂರು ನೀಡಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಚೇತನ್ ಮಾತನಾಡಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದೆ. ಹಿಂದೂ ಧರ್ಮ ನಾನಾ ಪ್ರವರ್ಗಗಳಲ್ಲಿ ಇರುವವರನ್ನು ಬೇರ್ಪಡಿಸಿ ಅವರಲ್ಲಿ ಧರ್ಮಾಂಧತೆಯನ್ನು ಹುಟ್ಟುಹಾಕಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಉದ್ದೇಶದಿಂದ ಚೇತನ್ ಅವರು, ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂಬುದಾಗಿ ಶರ್ಮಾ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ– ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಅಧಿಕಾರ ದುರುಪಯೋಗ; ದೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.