ಬೆಂಗಳೂರು: ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಕಾರಿ ಪದ ಪ್ರಯೋಗ ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬುಧವಾರ ತಡರಾತ್ರಿ ಚಾಮರಾಜಪೇಟೆ ಪೊಲೀಸರು ವಶಕ್ಕೆ ಪಡೆದರು.

ಸಚಿವರ ಆಪ್ತ ಸಹಾಯಕ ಬಿ. ಎಸ್.ಅಶೋಕ್ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಅಗತ್ಯ ಬಿದ್ದರೆ ಬಂಧಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ವೇಳೆ ಜಮೀರ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ‘ಕರಿಯ’ ಎಂದು ನಿಂದಿಸಿದ್ದರು. ಇದಕ್ಕೆ ಪ್ರತಿಯಾಗಿ ಪುನೀತ್ ಕೆರೆಹಳ್ಳಿ ಅವರು ನ.11ರಂದು ಫೇಸ್ಬುಕ್ನಲ್ಲಿ ಸಚಿವರನ್ನು ನಿಂದಿಸಿದ್ದರು ಎನ್ನಲಾಗಿದೆ.

‘ಜಮೀರ್ ಕುರಿತು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಿಂದನೆ ಮಾಡಿದ್ದಾರೆ.ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಪದೇ ಪದೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ’ ಎಂದು ನೀಡಿರುವ ದೂರು ಆಧರಿಸಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.