ಬೆಂಗಳೂರು: ಜಾತಿ ನಿಂದನೆ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಣಧೀರ ಪಡೆಯ ಮುಖಂಡ ಬೈರಪ್ಪ ಹರೀಶ್ಕುಮಾರ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.

ಫೇಸ್ಬುಕ್ನಲ್ಲಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಪುನೀತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಿದ್ದಾರೆ.

‘ಪುನೀತ್ ವಿರುದ್ಧ ಬೇರೆ ಬೇರೆ ಆರೋಪಗಳ ಅಡಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿವೆ. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಹ ಸಲ್ಲಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಆತನ ಬಂಧನ ಸಹ ಆಗಿತ್ತು. ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾಧ್ಯಮದಲ್ಲಿ ಪ್ರಕಟವಾದ ವರದಿಯನ್ನು ನನ್ನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದೆ. ನಂತರ ಈ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.