ಬೆಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ನಗರದ ಸಶಸ್ತ್ರ ಮೀಸಲು ಪೊಲೀಸ್ ಪಡೆ ಪ್ರಧಾನ ಕಚೇರಿಯ ಹೆಡ್ ಕಾನ್ಸ್ಟೇಬಲ್ ಪ್ರಶಾಂತ್ ಕುಮಾರ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮಹಾಲಕ್ಷ್ಮೀ ಲೇಔಟ್ ನಿವಾಸಿ ಭಾಗ್ಯಮ್ಮ ಎಂಬುವವರು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಶಾಂತ್ ಕುಮಾರ್, ದೀಪಾ, ಮಂಜುನಾಥ್ ಪ್ರಸಾದ್ ವಿರುದ್ಧ ದೂರು ದಾಖಲಿಸಿದ್ದಾರೆ.

‘2011ರಲ್ಲಿ ಪರಿಚಯವಾಗಿದ್ದ ಪ್ರಶಾಂತ್ ಕುಮಾರ್ ಅವರಿಗೆ ನನ್ನ ಇಬ್ಬರು ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುವಂತೆ ಕೇಳಿದ್ದೆ. ಆಗ ತನಗೆ ಹಲವು ಸರ್ಕಾರಿ ಅಧಿಕಾರಿಗಳು ಪರಿಚಯವಿದ್ದು, ಕೆಲಸ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರು. ಮೂರು ತಿಂಗಳಲ್ಲಿ ಎಫ್ಡಿಎ, ಎಸ್ಡಿಎ ಶ್ರೇಣಿಯ ಕೆಲಸ ಕೊಡಿಸುವುದಾಗಿ ಹೇಳಿ ₹25 ಲಕ್ಷ ನಗದು ನೀಡುವಂತೆ ಬೇಡಿಕೆ ಇಟ್ಟಿದ್ದರು. ನಂತರ ಮಂಜುನಾಥ್ ಪ್ರಸಾದ್ ಎಂಬಾತನನ್ನು ತನ್ನ ಆಪ್ತ ಸಹಾಯಕ ಎಂದು ಪ್ರಶಾಂತ್ ಪರಿಚಯ ಮಾಡಿಸಿದ್ದರು’ ಎಂದು ಭಾಗ್ಯಮ್ಮ ದೂರಿನಲ್ಲಿ ತಿಳಿಸಿದ್ದಾರೆ.

‘ಹಂತ ಹಂತವಾಗಿ ಒಟ್ಟು₹47 ಲಕ್ಷ ನಗದು , 857 ಗ್ರಾಂ. ಚಿನ್ನಾಭರಣವನ್ನೂ ಪಡೆದಿದ್ದು, ಯಾವುದೇ ಸರ್ಕಾರಿ ನೌಕರಿ ಕೊಡಿಸಿಲ್ಲ' ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಪ್ರಶಾಂತ್ ಕುಮಾರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸೋಮವಾರ ವಿಚಾರಣೆಗೆ ಬರುವಂತೆ ಪ್ರಶಾಂತ್ ಅವರಿಗೆ ನೋಟಿಸ್ ನೀಡಲಾಗಿದೆ. ವಿಚಾರಣೆ ಬಳಿಕ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು, ಅವರು ಮುಂದಿನಕ್ರಮ ಕೈಗೊಳ್ಳುತ್ತಾರೆ’ ಎಂದು ಠಾಣೆಯ ಇನ್ಸ್ಪೆಕ್ಟರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.