ಬೆಂಗಳೂರು: ಆರ್.ಟಿ. ನಗರದ ಚಾಮುಂಡಿ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದ ಪ್ರಕರಣದಲ್ಲಿ ಗಾಯಗೊಂಡಿದ್ದ ಯುವಕ ರಾಶಿ(25) ಅವರು ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ರಾಶಿ ಅವರು ಎ.ಸಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದರು. ಅ.27ರಂದು ರಾತ್ರಿ ತಂದೆ–ತಾಯಿ ಹಾಗೂ ಸಹೋದರನ ಜತೆಗೆ ಊಟ ಮುಗಿಸಿ ಮನೆಯ ನೆಲಮಹಡಿಯಲ್ಲಿದ್ದ ಕೊಠಡಿಯಲ್ಲಿ ನಿದ್ರೆ ಮಾಡುತ್ತಿದ್ದರು. ಮಧ್ಯರಾತ್ರಿ ಎದ್ದು ಮೊದಲ ಮಹಡಿಯಲ್ಲಿರುವ ಅಡುಗೆ ಮನೆಯಲ್ಲಿ ನೀರು ಕುಡಿಯಲು ತೆರಳಿದ್ದರು. ಸಿಲಿಂಡರ್ನಿಂದ ಅನಿಲ ಸೋರಿಕೆ ಆಗಿರುವುದು ರಾಶಿ ಅವರ ಗಮನಕ್ಕೆ ಬಂದಿರಲಿಲ್ಲ. ಲೈಟ್ ಹಾಕುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿತ್ತು. ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.