ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಪೀಠೋಪಕರಣ ತಯಾರಿಕೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣ ಸುಟ್ಟಿವೆ.

ಬ್ಯಾಟರಾಯನಪುರದ ಟಿಂಬರ್ ಬಡಾವಣೆಯ 'ಲಕ್ಷ್ಮಿ ಎಂಟರ್‌ಪ್ರೈಸಸ್' ಮಳಿಗೆಯಲ್ಲಿ ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

'ಮಳಿಗೆಯಲ್ಲಿ ಸಣ್ಣದಾಗಿ ಕಾಣಿಸಿಕೊಂಡಿದ್ದ ಬೆಂಕಿ ಕೆನ್ನಾಲಗೆ, ಕೆಲವೇ ನಿಮಿಷಗಳಲ್ಲಿ ಧಗ ಧಗ ಉರಿಯಲಾರಂಭಿಸಿತ್ತು. ಇಡೀ ಮಳಿಗೆಯಲ್ಲಿದ್ದ ಹೊಸ ಪೀಠೋಪಕರಣಕ್ಕೆ ಬೆಂಕಿ ತಗುಲಿತು' ಎಂದು ಪೊಲೀಸರು ಹೇಳಿದರು.

'ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಮೂರು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಸದ್ಯ ಮಳಿಗೆಯಲ್ಲಿರುವ ಅವಶೇಷಗಳನ್ನು ತೆರವು ಮಾಡುವ ಕೆಲಸ ನಡೆದಿದೆ. ಬೆಂಕಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ' ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.