ಬೆಂಗಳೂರು: ಉಪ್ಪಾರಪೇಟೆ ಠಾಣೆ ವ್ಯಾಪ್ತಿಯ ಬಳೇಪೇಟೆಯಲ್ಲಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ ಶುಕ್ರವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ಸಿಲುಕಿದ್ದ ಯುವಕನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

‘ಕೆಳ ಮಹಡಿಯಲ್ಲಿದ್ದ ಪೇಂಟ್ ಮಾರಾಟ ಮಳಿಗೆ ಹಾಗೂ ಮೊದಲ ಮಹಡಿಯಲ್ಲಿದ್ದ ಬ್ಯಾಗ್ ಮಾರಾಟ ಮಳಿಗೆಗಳಲ್ಲಿ ಬೆಂಕಿ ಆವರಿಸಿತ್ತು. ಬೆಂಕಿ ನಂದಿಸಲು ಯತ್ನಿಸಿದ್ದ ಯುವಕನೊಬ್ಬ ಕಟ್ಟಡದ ಕೊಠಡಿಯಲ್ಲಿ ಸಿಲುಕಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನನ್ನು ರಕ್ಷಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನವಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಮಳಿಗೆಯಲ್ಲಿದ್ದ ₹ 30 ಲಕ್ಷ ಮೌಲ್ಯದ ವಸ್ತುಗಳು ಸುಟ್ಟಿವೆ. ಮಳಿಗೆ ಮಾಲೀಕರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.