ಬೆಂಗಳೂರು: ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಪ್ರಮೋದ್ ಬಡಾವಣೆಯಲ್ಲಿರುವ ಗುಜರಿ ಗೋದಾಮಿನಲ್ಲಿ ಗುರುವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದ 8 ವಾಹನಗಳ ಮೂಲಕ ಕಾರ್ಯಾಚರಣೆ ನಡೆಸಿ ಬೆಂಕಿ
ನಂದಿಸಲಾಗಿದೆ.

‘ನಾಯಂಡನಹಳ್ಳಿ ಬಳಿಯ ಗೋದಾಮಿನಲ್ಲಿ ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಇತರೆ ಗುಜರಿ ವಸ್ತುಗಳನ್ನು ಸಂಗ್ರಹಿಸಲಾಗಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು, ಇಡೀ ಗೋದಾಮು ಆವರಿಸಿತ್ತು. ನಗರದ ವಿವಿಧೆಡೆಯ ಅಗ್ನಿಶಾಮಕ ದಳದ 8 ವಾಹನಗಳಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದುರಸ್ತಿ ಸ್ಥಿತಿಯಲ್ಲಿದ್ದ ಕ್ಯಾಂಟರ್ ವಾಹನವೊಂದನ್ನು ಗೋದಾಮು ಎದುರು ನಿಲ್ಲಿಸಲಾಗಿತ್ತು. ಅದು ಸಹ ಬೆಂಕಿಗೆ ಆಹುತಿಯಾಗಿದೆ. ಅವಘಡದಲ್ಲಿ ಎಷ್ಟು ನಷ್ಟವಾಗಿದೆ ಎಂಬುದನ್ನು ಮಾಲೀಕರಿಂದ ತಿಳಿಯಬೇಕಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.