ಬೆಂಗಳೂರು: ಯಾವುದೇ ಕ್ಷೇತ್ರದಲ್ಲಿರಲಿ,ಪ್ರತಿಯೊಬ್ಬ ಮನುಷ್ಯನೂ ತನ್ನ ನಿಲುವನ್ನು ಪ್ರಕಟಿಸುವ ಅಗತ್ಯವಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಎಲ್.ಶಂಕರ್ ಅಭಿಪ್ರಾಯಪಟ್ಟರು.

ಅವರು ಗುರುವಾರ ಬೆಂಗಳೂರು ವಿಶ್ವವಿದ್ಯಾಲಯದಲ್ಲಿಪ್ರದರ್ಶನ ಕಲೆಗಳ ವಿಭಾಗ ಮತ್ತು ಭಾರತೀಯ ಯಾತ್ರಾ ಕೇಂದ್ರ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ಅವರು ರಂಗಭೂಮಿ ಕುರಿತು ರಚಿಸಿರುವ ಮೂರು ಕೃತಿಗಳ ಲೋಕಾರ್ಪಣೆ ಮಾಡಿ ಮಾತನಾಡಿದರು.

‘ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹಿರಿಯ ಸಾಹಿತಿ ಕುವೆಂಪು ಅವರನ್ನು ಭೇಟಿ ಮಾಡಲು ಬಯಸಿದ್ದರು. ಆದರೆ ಭಾರತದ ಎರಡನೇ ಗಾಂಧಿ ಜಯಪ್ರಕಾಶ್ ನಾರಾಯಣ್ ಅವರನ್ನು ಜೈಲಿಗೆ ಕಳುಹಿಸಿದವರು ಎಂಬ ಕಾರಣಕ್ಕೆ ಈ ಭೇಟಿಯನ್ನು ಕುವೆಂಪು ನಿರಾಕರಿಸಿದ್ದರು. ಇದು ಅವರ ದೃಢ ನಿಲುವು. ಇಂತಹ ನಿಲುವು ಪ್ರಕಟಿಸುವ ಎದೆಗಾರಿಕೆ ಬೇಕು’ ಎಂದರು.

ಪುಸ್ತಕದ ಕುರಿತು ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ ಸಿ.ಬಸವಲಿಂಗಯ್ಯ ಮಾತನಾಡಿದರು. ನ್ಯಾಕ್ ನಿರ್ದೇಶಕ ಪ್ರೊ.ಎಸ್.ಸಿ.ಶರ್ಮಾ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಪ್ರೊ.ಆರ್.ಭೀಮಸೇನ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಹಂಚೆ, ಪ್ರದರ್ಶನ ಕಲಾ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ಎನ್.ಸುಶೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.