ಬೆಂಗಳೂರು: ನಗರದಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್, ಮತ್ತು ಚಾರ್ಮಾಡಿ ಘಾಟ್ ರಸ್ತೆಗಳಲ್ಲಿ ಭಾರಿ ಮಳೆಯಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ವಿಮಾನ ಪ್ರಯಾಣಕ್ಕೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದ್ದು, ವಿಮಾನಯಾನ ಕಂಪನಿಗಳು ಪ್ರಯಾಣ ದರವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿವೆ.

ಸಾಮಾನ್ಯ ದಿನಗಳಲ್ಲಿ ವಿಮಾನ ಪ್ರಯಾಣ ದರ ಸರಾಸರಿ ₹2,280ರಷ್ಟು ಇರುತ್ತಿತ್ತು. ಆದರೆ, ಶುಕ್ರವಾರ ಕೆಲ ಪ್ರಯಾಣಿಕರು, ₹ 9,715 ರಿಂದ ₹ 53,600ರವರೆಗೆ ಹಣ ಕೊಟ್ಟು ನಗರದಿಂದ ಮಂಗಳೂರಿಗೆವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ.

‘ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಗುಡ್ಡ ಕುಸಿಯುತ್ತಿದೆ. ಅದರಿಂದಾಗಿ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ಬೆಂಗಳೂರಿನಿಂದ ಮಂಗಳೂರು ಹಾಗೂ ಸುತ್ತಮುತ್ತ ಊರುಗಳಿಗೆ ವಾಹನ ಸಂಪರ್ಕ ಕಡಿತಗೊಂಡಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ವಿಮಾನಯಾನ ಕಂಪನಿಗಳು, ಟಿಕೆಟ್ ದರ ಹೆಚ್ಚಳ ಮಾಡಿ ದುಡ್ಡು ಮಾಡುತ್ತಿವೆ’ ಎಂದು ಕೆಲ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಬಹುತೇಕ ಗ್ರಾಮಗಳು ಜಲಾವೃತಗೊಂಡಿದ್ದು, ಜನರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಮಂಗಳೂರಿನ ಜನ, ಊರಿಗೆ ಹೋಗಲು ಬಸ್ಗಳಿಲ್ಲ. ಪ್ರಯಾಣಿಕರು ವಿಮಾನವನ್ನೇ ನೆಚ್ಚಿಕೊಳ್ಳಬೇಕಾಗಿದೆ. ಇಂಥ ಸಂದರ್ಭದಲ್ಲೇ ಪ್ರಯಾಣ ದರ ಹೆಚ್ಚಳ ಮಾಡಿರುವುದು ನಾಚಿಕೆಗೇಡು’ ಎಂದು ಯಶವಂತ್ ಕದ್ರಿ ಎಂಬುವರು ಕಿಡಿಕಾರಿದ್ದಾರೆ.

ಪ್ರಯಾಣ ದರ ಏರಿಕೆ ಬಗ್ಗೆ ಪ್ರತಿಕ್ರಿಯೆ ಪಡೆಯಲು ವಿಮಾನಯಾನ ಕಂಪನಿಯವರು ಕರೆಗೆ ಲಭ್ಯರಾಗಿಲ್ಲ.

ಇನ್ನಷ್ಟು...

* ಕಡಲಾಯ್ತು ದಕ್ಷಿಣ, ಜನ ಹೈರಾಣ

* ಪ್ರವಾಹ, ಭೂಕುಸಿತಕ್ಕೆ 106 ಬಲಿ

* ಸಂಪರ್ಕ ಕಡಿತ: ಗೂಗಲ್ ಅಪ್ಡೇಟ್

* ಇಳಿದು ಹೋಗಮ್ಮ ಕಾವೇರಿ ತಾಯಿ...

* ಗಂಗಾವಳಿ ಪ್ರವಾಹ; ಹೆದ್ದಾರಿಯಲ್ಲೇ ಜೀವನ

* ಸಿಗದ ಸಂಪರ್ಕ: ಕವಿದ ಆತಂಕ

* ಉಕ್ಕಿದ ನದಿ, ಸಂಕಷ್ಟದಲ್ಲಿ ಜನ–ಜಾನುವಾರು

* ಮಲೆನಾಡಿನಲ್ಲಿ ಭಾರಿ ಮಳೆ: ಪೆಟ್ರೋಲ್; ಡೀಸೆಲ್ ಕೊರತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.