ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸುತ್ತಮುತ್ತ ಭಾರಿ ಮಳೆ ಹಾಗೂ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ 14 ವಿಮಾನಗಳ ಮಾರ್ಗ ಬದಲಾಯಿಸಲಾಗಿದ್ದು, 4 ವಿಮಾನಗಳ ಸಂಚಾರ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಗಾಳಿ, ಗುಡುಗು ಮತ್ತು ಮಿಂಚು ಸಹಿತ ಮಳೆ ಸುರಿದಿದ್ದರಿಂದ ಸಂಜೆ 4.05ರಿಂದ 4.51ರವರೆಗಿನ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.

‘ಒಟ್ಟು 14 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, 12 ವಿಮಾನಗಳನ್ನು ಚೆನ್ನೈಗೆ, ಒಂದು ಕೊಯಂಬತ್ತೂರು ಹಾಗೂ ಮತ್ತೊಂದನ್ನು ಹೈದರಾಬಾದ್ಗೆ ಮಾರ್ಗ ಬದಲಿಸಲಾಗಿದೆ. 7 ಇಂಡಿಗೊ ವಿಮಾನಗಳು, 3 ವಿಸ್ತಾರಾ, ಎರಡು ಆಕಾಸಾ ಏರ್ಲೈನ್ಸ್, ಒಂದು ಗೋಏರ್ ವಿಮಾನಗಳು ಸೇರಿವೆ’ ಎಂದು ಏರ್ಪೋರ್ಟ್ ಅಧಿಕಾರಿ ಹೇಳಿದ್ದಾರೆ.

ಹವಾಮಾನ ಇಲಾಖೆ ಪ್ರಕಾರ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಂಗಳವಾರ ಸಂಜೆ 45.2 ಮಿ.ಮೀ ಮಳೆ ಬಿದ್ದಿದೆ. ಮಳೆಯಿಂದಾಗಿ ರಸ್ತೆ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.