ಬೆಂಗಳೂರು: ‘ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವು ಆಗಸ್ಟ್ 4 ರಿಂದ ಆಗಸ್ಟ್ 15ರವರೆಗೂ ಲಾಲ್ಬಾಗ್ನಲ್ಲಿ ನಡೆಯಲಿದೆ’ ಎಂದು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಡಿನ ಕೀರ್ತಿಯನ್ನು ದೇಶದಲ್ಲಿ ಪಸರಿಸಿದ ಕೆಂಗಲ್ ಹನುಮಂತಯ್ಯ ಅವರ ಜೀವನ, ಸಾಧನೆ, ಹೋರಾಟಗಳನ್ನು ಈ ವರ್ಷ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ಪುಷ್ಪ ಗೌರವ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ’ ಎಂದು ವಿವರಿಸಿದರು.

‘ತೋಟಗಾರಿಕೆ ಇಲಾಖೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ 214ನೇ ಫಲಪುಷ್ಪ ಪ್ರದರ್ಶನ ಇದಾಗಿದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಆಗಸ್ಟ್ 4ರಂದು ಸಂಜೆ 6ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ’ ಎಂದರು.

‘ಗಾಜಿನ ಮನೆಯ ಕೇಂದ್ರ ಭಾಗದಲ್ಲಿ 18 ಅಡಿ ಅಗಲ, 36 ಅಡಿ ಉದ್ದ ಮತ್ತು 18 ಅಡಿ ಎತ್ತರದ ವಿಧಾನಸೌಧವು 7.2 ಲಕ್ಷ ವಿವಿಧ ತಳಿಯ ಪುಷ್ಪಗಳಲ್ಲಿ ಅರಳಲಿದೆ. ಕೆಂಗಲ್ ಹನುಮಂತಯ್ಯ ಅವರ 14 ಅಡಿ ಎತ್ತರದ ಬೃಹತ್ ಪ್ರತಿಮೆಯು ಅನಾವರಣಗೊಳ್ಳಲಿದ್ದು, ನೋಡಗರ ಕಣ್ಮನ ಸೆಳೆಯಲಿದೆ. ಗಾಜಿನ ಮನೆಯ ಕೇಂದ್ರ ಭಾಗದ ಬಲಬದಿಗೆ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಪುಷ್ಪ ಮಾದರಿಯನ್ನು 3.48 ಲಕ್ಷ ಸೇವಂತಿಗೆ ಹೂಗಳನ್ನು ನಿರ್ಮಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಆಗಸ್ಟ್ 5ರಂದು ನಡೆಯುವ ಇಕೆಬಾನ, ತರಕಾರಿ ಕೆತ್ತನೆ, ಪುಷ್ಪಭಾರತಿ, ಬೋನ್ಸಾಯ್, ಡಚ್ ಹೂವಿನ ಜೋಡಣೆ, ಥಾಯ್ ಆರ್ಟ್, ಜಾನೂರು ಒಣಹೂವಿನ ಜೋಡಣೆಯ ಕಲೆಗಳ ಸ್ಪರ್ಧೆಯ ಪ್ರದರ್ಶನವನ್ನು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಉದ್ಘಾಟಿಸಲಿದ್ದಾರೆ. ಚಲನಚಿತ್ರ ನಟಿ ಉಮಾಶ್ರೀ ಭಾಗವಹಿಸಲಿದ್ದಾರೆ.

ಇಕೆಬಾನ ಸೇರಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಆಗಸ್ಟ್ 14ರಂದು ಸಾಹಿತಿ ಶೂದ್ರ ಶ್ರೀನಿವಾಸ್, ಜಾನಪದ ತಜ್ಞೆ ಕೆ.ಆರ್. ಸಂಧ್ಯಾ ರೆಡ್ಡಿ, ಚಲನಚಿತ್ರ ನಟಿ ರಚಿತಾ ರಾಮ್ ಬಹುಮಾನಗಳನ್ನು ವಿತರಿಸಲಿದ್ದಾರೆ.

ತೋಟಗಾರಿಕೆ ನಿರ್ದೇಶಕ ರಮೇಶ್ ಡಿ.ಎಸ್., ಜಂಟಿ ನಿರ್ದೇಶಕ ಎಂ. ಜಗದೀಶ್, ಉಪನಿರ್ದೇಶಕಿ ಜಿ. ಕುಸುಮಾ ಇದ್ದರು.

ಪ್ರವೇಶ ಶುಲ್ಕ ಹೀಗಿದೆ...

ಲಾಲ್ಬಾಗ್ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು ಆನ್ಲೈನ್ ಬುಕಿಂಗ್ ಪಡೆದುಕೊಳ್ಳುವ ವ್ಯವಸ್ಥೆಯನ್ನು ಪ್ರಥಮ ಬಾರಿಗೆ ಅವಕಾಶ ನೀಡಲಾಗಿದೆ. *ವಯಸ್ಕರಿಗೆ ₹ 70 * ರಜೆ ದಿನಗಳಲ್ಲಿ ₹ 80 * ಮಕ್ಕಳಿಗೆ ₹ 30 * ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ * ಪ್ರದರ್ಶನದ ಸಮಯ: ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ

ಅಂಕಿ–ಅಂಶಗಳು

₹2.50 ಕೋಟಿ ಫಲಪುಷ್ಪ ಪ್ರದರ್ಶನದ ಒಟ್ಟು ವೆಚ್ಚ 10 ಲಕ್ಷ ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡುವವರ ಅಂದಾಜು ಸಂಖ್ಯೆ 136 ಉದ್ಯಾನದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು 29 ಲಕ್ಷ ಅಂದಾಜು ಬಳಕೆಯಾಗುವ ಹೂ ಕುಂಡಗಳು ಪ್ರತ್ಯೇಕಿಸಿದ ಹೂಗಳ ಸಂಖ್ಯೆ

ವಾಹನ ನಿಲುಗಡೆ ಎಲ್ಲಿ?

ಹಾಪ್ಕಾಮ್ಸ್ ಆವರಣ ಮತ್ತು ಜೆ.ಸಿ. ರಸ್ತೆಯಲ್ಲಿರುವ ಬಿಬಿಎಂಬಿ ಬಹುಮಹಡಿ ವಾಹನ ನಿಲ್ದಾಣ

ಶಾಂತಿನಗರ ಬಸ್ನಿಲ್ದಾಣದ ಬಹುಮಹಡಿ ವಾಹನ ನಿಲ್ದಾಣ

ಅಲ್ ಅಮೀನ್ ಕಾಲೇಜು ಮೈದಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.