ಬೆಂಗಳೂರು: ‘ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಮಕ್ಕಳ ತಜ್ಞ ಡಾ.ಸಾರ್ವಭೌಮ ಎಸ್. ಬಗಲಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ಅರ್ಜಿಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಿ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯಪುರ ಜಿಲ್ಲಾಧಿಕಾರಿಗೆ ನಿರ್ದೇಶಿಸಲಾಗಿದೆ. ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಲಾಗಿದೆ.

ಮನವಿ ಏನು?: ‘ಗರ್ಭಧಾರಣೆ ಮತ್ತು ಭ್ರೂಣಲಿಂಗ ಪತ್ತೆ ವಿಧಾನಗಳ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಹೀಗಾಗಿ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

‘ರಾಜ್ಯದ ಗಡಿ ಭಾಗದ ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಪರೀಕ್ಷೆ ನಡೆಸುವ ಅಕ್ರಮ ಸ್ಕ್ಯಾನಿಂಗ್ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿ ಹೆಣ್ಣು ಭ್ರೂಣಗಳನ್ನು ಪತ್ತೆ ಹಚ್ಚಿ ಕಾನೂನು ಬಾಹಿರವಾಗಿ ಗರ್ಭಪಾತ ಮಾಡಿಸಲಾಗುತ್ತಿದೆ’ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದ ಮಂಡಿಸಿದರು.

ದೊಡ್ಡ ದಂಧೆಯೇ ನಡೆಯುತ್ತಿದೆ’

‘ನೆರೆ ರಾಜ್ಯ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದು ಭ್ರೂಣ ಪರೀಕ್ಷೆ ಮಾಡಿಸಿ ಅವುಗಳನ್ನು ತೆಗೆಸುವ ದೊಡ್ಡ ದಂಧೆಯೇ ರಾಜ್ಯದಲ್ಲಿ ನಡೆಯುತ್ತಿದೆ’ ಎಂಬುದು ಅರ್ಜಿದಾರರ ಆರೋಪ.

‘ಈ ಅಕ್ರಮ ಚಟುವಟಿಕೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಆರೋಗ್ಯ ಸಚಿವರೂ, ಪ್ರಸೂತಿ ತಜ್ಞರ ಜೊತೆ ಶಾಮೀಲಾಗಿದ್ದಾರೆ. ಸರ್ಕಾರ ಇವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.