ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಜಿ.ಕೆ.ವೀರೇಶ್(89) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಗಂಗಾನಗರದ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಇವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.

ಮೃತರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 3 ಗಂಟೆಗೆ ಹೆಬ್ಬಾಳದ ವಿದ್ಯುತ್ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಗೊದ್ದು ಗ್ರಾಮದಲ್ಲಿ ಏಪ್ರಿಲ್ 4, 1934ರಲ್ಲಿ ಜನಿಸಿದ್ದ ವೀರೇಶ್ ಅವರು, 1957ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಕೃಷಿ ವಿಷಯದಲ್ಲಿ ಬಿ.ಎಸ್ಸಿ ಪದವಿ, 1960ರಲ್ಲಿ ನವದೆಹಲಿಯ ಐಎಆರ್ಐನಿಂದ ಎಂ.ಎಸ್ಸಿ ಪದವಿ, 1973ರಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪದವಿ ಪಡೆದಿದ್ದರು.

1961ರಿಂದ 1995ರವರೆಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ, ಸಹಾಯಕ ಪ್ರಾಧ್ಯಾಪಕ, ಪ್ರಾಧ್ಯಾಪಕ, ವಿಭಾಗದ ಮುಖ್ಯಸ್ಥರು ಹಾಗೂ ಡೀನ್ನಂತಹ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. 1995ರಿಂದ 1998ರ ವರೆಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಮತ್ತು ಆಡಳಿತ ವಿಭಾಗದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

2001–2002ರವರೆಗೆ ಕರ್ನಾಟಕ ಕೃಷಿ ಆಯೋಗದ ಅಧ್ಯಕ್ಷರಾಗಿದ್ದ ಜಿ.ಕೆ. ವೀರೇಶ್ ಅವರು, ರೈತರ ಆತ್ಮಹತ್ಯೆಗೆ ಕಾರಣ ತಿಳಿಯುವುದಕ್ಕಾಗಿ ಸರ್ಕಾರ ರಚಿಸಿದ್ದ ಉನ್ನತಮಟ್ಟದ ಸಮಿತಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. 2004ರಲ್ಲಿ ಕರ್ನಾಟಕ ಸರ್ಕಾರದ ಸಾವಯವ ಕೃಷಿ ಮಿನಿಮಿಷನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.