ಬೆಂಗಳೂರು: ಕರ್ನಾಟಕದ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಹಾಗೂ ರಾಜ್ಯದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ಜೆ. ಅಲೆಕ್ಸಾಂಡರ್ (83) ಅವರು ಬೆಂಗಳೂರಿನಲ್ಲಿ ಶುಕ್ರವಾರ ನಿಧನರಾದರು.

ಶುಕ್ರವಾರ ಸಂಜೆ ಹೃದಯಾಘಾತಕ್ಕೆ ಒಳಗಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗಮಧ್ಯೆಯೇ ಅವರು ಮೃತಪಟ್ಟರು ಎಂದು ಮೂಲಗಳು ಹೇಳಿವೆ. ಮೃತರುಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ.

ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯವರಾದ ಅಲೆಕ್ಸಾಂಡರ್, ಕರ್ನಾಟಕ ಶ್ರೇಣಿಯ ಐಎಎಸ್ ಅಧಿಕಾರಿಯಾಗಿ ರಾಜ್ಯಕ್ಕೆ ಬಂದಿದ್ದರು. ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿ ಬಳಿಕ ರಾಜಕಾರಣ ಪ್ರವೇಶಿಸಿದ್ದ ಅವರು, 1999ರ ವಿಧಾನಸಭಾ ಚುನಾವಣೆಯಲ್ಲಿ ಭಾರತಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಎಸ್.ಎಂ. ಕೃಷ್ಣ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು.

ಬೆಂಗಳೂರಿನ ಯಂಗ್ ಮೆನ್ಸ್ ಕ್ರಿಶ್ಚಿಯನ್ ಅಸೋಸಿಯೇಷನ್ (ವೈಎಂಸಿಎ) ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.