ಬೆಂಗಳೂರು: ನಗರದಲ್ಲಿ ಗುರುವಾರ ಸಂಭವಿಸಿದ ಪಟಾಕಿ ಅವಘಡದಲ್ಲಿ ನಾಲ್ಕು ಮಕ್ಕಳ ಕಣ್ಣಿಗೆ ಗಾಯವಾಗಿದೆ.

ಪಟಾಕಿ ಸಿಡಿಯಲ್ಲಿಲ್ಲವೆಂದು ಪರಿಶೀಲಿಸಲು ಹತ್ತಿರ ಹೋದ ವೇಳೆ ಸಿಡಿದು ಹತ್ತು ವರ್ಷದ ಬಾಲಕನ ಕಣ್ಣಿಗೆ ಗಾಯವಾಗಿದೆ. ಮತ್ತೊಂದು ಪ್ರಕರಣದಲ್ಲಿ ಪಟಾಕಿ ಸಿಡಿದು ಎಂಟು ವರ್ಷದ ಬಾಲಕನ ಕಣ್ಣಿಗೆ ಗಾಯವಾಗಿದ್ದು, ದೃಷ್ಟಿ ಮರುಸ್ಥಾಪನೆ ಕಷ್ಟವಾಗಿದೆ. ಪರೀಕ್ಷಾ ವರದಿ ಬಂದ ಬಳಿಕ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಮೂರು ವರ್ಷದ ಹೆಣ್ಣು ಮಗುವಿನ ಕಣ್ಣಿಗೂ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಂಕರ ಕಣ್ಣಿನ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಗಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆ 080-69038900, 9739883996 ಕರೆ ಮಾಡಬಹುದು.

ಪಟಾಕಿ ಸಿಡಿತ ವೇಳೆ ಗಾಯಗೊಂಡಿರುವ ಎಲ್.ಆರ್. ನಗರದ ಐದು ವರ್ಷದ ಬಾಲಕನಿಗೆ ಮಿಂಟೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.