ಸೋಮವಾರ, 30 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಗಣಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರ ಬಂಧನ

ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಈಚೆಗೆ ಒಡಿಶಾದ ಶಂಕಿತ ಉಗ್ರನ ಬಂಧನ ಬಳಿಕ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ.
Published : 30 ಸೆಪ್ಟೆಂಬರ್ 2024, 7:45 IST
Last Updated : 30 ಸೆಪ್ಟೆಂಬರ್ 2024, 7:45 IST
ಫಾಲೋ ಮಾಡಿ
Comments

ಆನೇಕಲ್: ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಈಚೆಗೆ ಅಸ್ಸಾಂನ ಶಂಕಿತ ಉಗ್ರನ ಬಂಧನ ಬಳಿಕ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ.

ಪಾಕಿಸ್ತಾನ ಪ್ರಜೆಯ ಪತ್ನಿ ಬಾಂಗ್ಲಾದೇಶದವರಾಗಿದ್ದು, ಇಬ್ಬರ ಮಕ್ಕಳ ಜೊತೆ ಜಿಗಣಿ ಬಳಿಯ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದರು. ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಜಿಗಣಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಪಾಕಿಸ್ತಾನದ ಪ್ರಜೆ ಧರ್ಮದ ವಿಚಾರ ಸಂಬಂಧ ಆ ದೇಶದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಹೀಗಾಗಿ ಅಲ್ಲಿ ವಾಸ ಮಾಡಲು ಸಾಧ್ಯವಾಗದೆ ಬಾಂಗ್ಲಾದೇಶಕ್ಕೆ ತೆರಳಿದ್ದ ಎಂದು ತಿಳಿದು ಬಂದಿದೆ.

ಇದಾದ ಬಳಿಕ ಬಾಂಗ್ಲಾದೇಶದ ಢಾಕಾದಲ್ಲಿ ವಾಸವಿದ್ದ. ಅಲ್ಲಿನ ಯುವತಿಯ ವಿವಾಹವಾಗಿದ್ದ. 2014ರಲ್ಲಿ ಪತ್ನಿ ಜೊತೆ ಅಕ್ರಮವಾಗಿ ದೆಹಲಿಗೆ ಬಂದು, ಸ್ಥಳೀಯ ವ್ಯಕ್ತಿಯ ನೆರವಿನಿಂದ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ.

2018ರಲ್ಲಿ ಕುಟುಂಬ ಸಮೇತ ಬೆಂಗಳೂರಿಗೆ ಬಂದಿದ್ದ. ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆಗೆ ಜಿಗಣಿಯಲ್ಲಿ ವಾಸವಿದ್ದ. ಈ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT