ಬೆಂಗಳೂರು: ನಗರದಲ್ಲಿ ಅಕ್ಟೋಬರ್ 11, 12 ಮತ್ತು ಮೈಸೂರಿನಲ್ಲಿ 13, 14ರಂದು ಜಯದೇವ ಹೃದ್ರೋಗ ಸಂಸ್ಥೆಯಲ್ಲಿ 200 ಬಡ ರೋಗಿಗಳಿಗೆ ಉಚಿತವಾಗಿ ಆಂಜಿಯೊಪ್ಲಾಸ್ಟಿ ಮಾಡಲಾಗುತ್ತದೆ.

ಜಯದೇವ ಹೃದ್ರೋಗ ಸಂಶೋಧನಾ ಸಂಸ್ಥೆಯು ವಿವಿಧ ಸಂಸ್ಥೆಗಳ ಜೊತೆಗೂಡಿ ಈ ಯೋಜನೆ ಕೈಗೆತ್ತಿಕೊಂಡಿದೆ. ಉಚಿತವಾಗಿ ಸ್ಟಂಟ್ ಅಳವಡಿಸುವ ಉದ್ದೇಶ ಹೊಂದಿದೆ.

‘ಬಡವರು ಹಾಗೂ ಹಿರಿಯ ನಾಗರೀಕರಿಗಾಗಿ ಉನ್ನತ ಮಟ್ಟದ ಮೆಡಿಕೇಟೆಡ್ ಸ್ಟಂಟ್ಗಳನ್ನು ಅಳವಡಿಸಲಾಗುತ್ತದೆ. ಈ ಸೌಲಭ್ಯವನ್ನು ಈಗಾಗಲೇ ಆಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ತಿಳಿಸಿದರು.

ರೋಗಿಗಳು ದಾಖಲಾಗಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಅಕ್ಟೋಬರ್ 6ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಳಾಸ: ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್. ದೂರವಾಣಿ ಸಂಖ್ಯೆ: 080 22977433.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.