ಬೆಂಗಳೂರು: ಪ್ರತಿಧೀ ಫೌಂಡೇಷನ್ ಇದೇ 15 ಮತ್ತು 16ರಂದು ‘ಸ್ವಸ್ಥ ಕರ್ನಾಟಕ 2024’ ಶೀರ್ಷಿಕೆಯಡಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಅರಮನೆ ಮೈದಾನದಲ್ಲಿ (ಪ್ರಿನ್ಸಸ್ ಶ್ರೈನ್ –ಗೇಟ್ ಸಂಖ್ಯೆ 9) ಹಮ್ಮಿಕೊಂಡಿದೆ.

ಈ ಶಿಬಿರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾರ್ಯಕ್ರಮ ನಿರ್ದೇಶಕ ಡಾ.ಎಸ್. ಸಚ್ಚಿದಾನಂದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ. ಶಿಬಿರದಲ್ಲಿ ಉಚಿತ ತಪಾಸಣೆ, ಸಮಾಲೋಚನೆ ಹಾಗೂ ಚಿಕಿತ್ಸೆ ಇರಲಿದೆ ಎಂದು ಫೌಂಡೇಷನ್ ಅಧ್ಯಕ್ಷೆ ಡಾ.ಜಿ. ಪ್ರಜ್ವಲ ರಾಜ್ ತಿಳಿಸಿದ್ದಾರೆ.

‘ಹೃದ್ರೋಗ ತಜ್ಞರು, ಮಕ್ಕಳ ತಜ್ಞರು, ಚರ್ಮ ರೋಗ ತಜ್ಞರು, ನರರೋಗ ತಜ್ಞರು, ಸ್ತ್ರೀರೋಗ ತಜ್ಞರು ಸೇರಿ ವಿವಿಧ ವಿಭಾಗಗಳ ತಜ್ಞ ವೈದ್ಯರು ಶಿಬಿರ ದಲ್ಲಿ ಪಾಲ್ಗೊಳ್ಳುತ್ತಾರೆ.

ಹೃದ್ರೋಗ, ಕಣ್ಣಿನ ಸಮಸ್ಯೆ, ಚರ್ಮರೋಗ, ಕ್ಯಾನ್ಸರ್ ಸೇರಿ ವಿವಿಧ ರೋಗಗಳು ಹಾಗೂ ಸಮಸ್ಯೆಗಳಿಗೆ ಸಂಭಂಧಿಸಿದಂತೆ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸಲಾಗುತ್ತದೆ. ಕನ್ನಡ, ಔಷಧಗಳನ್ನು ಉಚಿತವಾಗಿ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.

ನೋಂದಣಿ ಹಾಗೂ ಸಂಪರ್ಕಕ್ಕೆ: 9886533393 ಅಥವಾ 9449097947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.