ಬೆಂಗಳೂರು: ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕಿನ ಸದಸ್ಯರು, ಗ್ರಾಹಕರು ಮತ್ತು ಸಾರ್ವಜನಿಕರಿಗೆ ನ.18ರಂದು ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಬನಶಂಕರಿ 3ನೇ ಹಂತದಲ್ಲಿ ಇರುವ ಬ್ಯಾಂಕ್ನ ಶಾಖೆ ಎದುರು ಹಮ್ಮಿಕೊಳ್ಳಲಾಗಿದೆ.

ಬನಶಂಕರಿ ರೋಟರಿ ಕ್ಲಬ್, ಸಂಪ್ರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದಲ್ಲಿ ನಡೆಯುವ ಈ ಶಿಬಿರದಲ್ಲಿ ತಜ್ಞ ವೈದ್ಯರ ತಂಡ ಭಾಗವಹಿಸಲಿದೆ. ಕಣ್ಣಿನ ತಪಾಸಣೆ, ಅಗತ್ಯ ಇರುವವರಿಗೆ ಉಚಿತವಾಗಿ ಕನ್ನಡಕ ವಿತರಣೆ, ಕ್ಯಾನ್ಸರ್ ತಪಾಸಣೆ, ಕಣ್ಣು–ಕಿವಿ–ಮೂಗು ಸಂಬಂಧಿತ ಆರೋಗ್ಯ ತಪಾಸಣೆ ನಡೆಯಲಿದೆ.

ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಶಿಬಿರ ಉದ್ಘಾಟಿಸಲಿದ್ದಾರೆ ಎಂದು ಬ್ಯಾಂಕ್ ಅಧ್ಯಕ್ಷ ಎಂ.ಆರ್. ವೆಂಕಟೇಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.