ಬೆಂಗಳೂರು: ಗೌರಿ–ಗಣೇಶ ಹಬ್ಬದ ಸಂದರ್ಭದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಕೆಎಸ್ಆರ್ಟಿಸಿ 1,500ಕ್ಕೂ ಅಧಿಕ ವಿಶೇಷ ಬಸ್ಗಳನ್ನು ಓಡಿಸಲು ನಿರ್ಧರಿಸಿದೆ. ಸೆಪ್ಟೆಂಬರ್ 5ರಿಂದ 7ರವರೆಗೆ ಬೆಂಗಳೂರಿನಿಂದ ಬಸ್ಗಳು ವಿವಿಧೆಡೆ ಸಂಚರಿಸಲಿವೆ. ಸೆ.8ರಂದು ವಾಪಸ್ಸಾಗಲಿವೆ.

ಗೌರಿ ವ್ರತ, ಗಣೇಶ ಚತುರ್ಥಿಗೆ ಊರಿಗೆ ತೆರಳುವವರ ಸಂಖ್ಯೆ ಹೆಚ್ಚಳವಾಗುವುದರಿಂದ ವಿಶೇಷ ಬಸ್ಗಳನ್ನು ಓಡಿಸಲಾಗುವುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಸಾರಿಗೆ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಇ.ವಿ. ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್ಗಳ ಸಂಚಾರ ಇರಲಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್ಗಳು ಹೊರಡಲಿವೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆಯ ರಾಜ್ಯಗಳ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪುಣೆ, ಎರ್ನಾಕುಲಂ, ಪಾಲ್ಘಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಬಸ್ಗಳ ಕಾರ್ಯಾಚರಣೆ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.