ಬೆಂಗಳೂರು: ಬಿಬಿಎಂಪಿಯ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಕಸ ನಿರ್ವಹಣೆ ಸಂಬಂಧ ಅಧಿಕಾರಿಗಳ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು, ‘ಕಸ ನಿರ್ವಹಣೆ ಸಮಸ್ಯೆ ನಿವಾರಣೆಗೆ ತಕ್ಷಣವೇ ಕ್ರಮ ತೆಗೆದುಕೊಳ್ಳಿ’ ಎಂದು ಸೂಚಿಸಿದ್ದಾರೆ.

ಕಸ ನಿರ್ವಹಣೆಯಲ್ಲಿನ ಲೋಪಗಳು ಮತ್ತು ನ್ಯೂನತೆಗಳ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತರು, ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳನ್ನು ವಿಚಾರಣೆಗೆ ಕರೆದಿದ್ದರು. ಬುಧವಾರ ನಡೆದ ವಿಚಾರಣೆಯಲ್ಲಿ ಬಿಬಿಎಂಪಿಯ ರಾಜರಾಜೇಶ್ವರಿ ನಗರ ವಲಯದ ಅಧಿಕಾರಿಗಳು ಮತ್ತು ಬಿಡಿಎ ಆಯುಕ್ತ ಮತ್ತು ಪಶ್ಚಿಮ ವಲಯದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಜರಾಗಿದ್ದರು.

ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಕಸ ನಿರ್ವಹಣೆಗೆ ಬಿಡಿಎ ಹಣ ನೀಡುತ್ತಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ದೂರಿದರು. ಆಗ ಬಿಡಿಎ ಅಧಿಕಾರಿಗಳು, ‘₹10 ಲಕ್ಷ ನೀಡಲಾಗಿದೆ. ಇನ್ನೂ ₹51 ಲಕ್ಷ ನೀಡಬೇಕಿದೆ. ಅದನ್ನು ಶೀಘ್ರವೇ ವರ್ಗಾಯಿಸುತ್ತೇವೆ’ ಎಂದರು.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣಕ್ಕೆ ವಾಯುವಿಹಾರಕ್ಕೆ ಬರುವ ಸಾರ್ವಜನಿಕರು ಕಸ ಎಸೆಯುತ್ತಿದ್ದಾರೆ ಎಂಬುದನ್ನು ಅಧಿಕಾರಿಗಳು ಹೇಳಿದರು. ಈ ಬಗ್ಗೆ ವಿ.ವಿ. ಕುಲಪತಿಗೆ ಪತ್ರ ಬರೆದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲು ಹೇಳಿ ಎಂದು ಲೋಕಾಯುಕ್ತರು ಸೂಚಿಸಿದರು.

ಬೀದಿನಾಯಿಗಳ ಹಾವಳಿ ತಡೆಗಟ್ಟಲು ಪಶುಸಂಗೋಪನಾ ವಿಭಾಗವು ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಂತಾನಶಕ್ತಿ ಹರಣ ಚಿಕಿತ್ಸೆಯನ್ನು ಹೆಚ್ಚು ನಡೆಸಬೇಕು. ಕಸ ನಿರ್ವಹಣೆಗೆ ಅಗತ್ಯವಿರುವ ಆಟೊ–ಟಿಪ್ಪರ್ಗಳು ಮತ್ತು ಇತರ ಸಲಕರಣೆಗಳನ್ನು ಖರೀದಿಸಿ. ಕಸದಿಂದ ಜನರಿಗೆ ತೊಂದರೆಯಾಗುವುದನ್ನು ತಪ್ಪಿಸಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.