ಬೆಂಗಳೂರು: ‘ಏಪ್ರಿಲ್ ಕೊನೆಯ ಅಥವಾ ಮೇ ಮೊದಲ ವಾರ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದಕ್ಕಾಗಿ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ವಾರ್ಡ್ ಮಟ್ಟದಲ್ಲಿ ನಿರಂತರ ಸಭೆಗಳನ್ನು ನಡೆಸುವ ಮೂಲಕ ಮತದಾರರ ಮನಗೆಲ್ಲಬೇಕು’ ಎಂದು ಸಚಿವ ಕೆ.ಗೋಪಾಲಯ್ಯ ಅವರು ಕಾರ್ಯಕರ್ತರಿಗೆ ತಿಳಿಸಿದರು.

ಬಿಬಿಎಂಪಿ ಚುನಾವಣೆ ಸಂಬಂಧ ಚರ್ಚಿಸುವ ಸಲುವಾಗಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್ನಲ್ಲಿ ನಡೆದ ಸಭೆಯಲ್ಲಿ ಅವರು ಶನಿವಾರ ಮಾತನಾಡಿದರು.

‘ಕ್ಷೇತ್ರದ 7 ವಾರ್ಡ್ಗಳ ಅಭಿವೃದ್ಧಿ ಕಾಮಗಾರಿಗಳ ಪಟ್ಟಿ ತಯಾರಿಸಲಾಗಿದ್ದು, ಮುಖ್ಯಮಂತ್ರಿ ಬಳಿ ಅನುದಾನ ಕೋರಿದ್ದೇನೆ. ಮುಂದಿನ ಕೆಲ ದಿನಗಳಲ್ಲಿ ಅನುದಾನ ಬಿಡುಗಡೆಯಾಗಲಿದೆ. ಪಕ್ಷದ ಸಂಘಟನೆ ಕುರಿತು ನಿರಂತರ ಸಭೆಗಳನ್ನು ನಡೆಸಲಾಗುತ್ತದೆ. ಚುನಾವಣೆಯಲ್ಲಿ ಎಲ್ಲರಿಗೂ ಟಿಕೆಟ್ ಸಿಗುವುದಿಲ್ಲ. ಈ ವಿಷಯದಲ್ಲಿ ಪಕ್ಷದ ತೀರ್ಮಾನವೇ ಅಂತಿಮ. ಅಂತಹ ಸಂದರ್ಭದಲ್ಲಿ ಅಭ್ಯರ್ಥಿಗಳು ಪಕ್ಷಕ್ಕಾಗಿ ತ್ಯಾಗ ಮಾಡಬೇಕು’ ಎಂದು ತಿಳಿಸಿದರು.

‘ಬಿಬಿಎಂಪಿ ಚುನಾವಣೆಯು ರಾಜ್ಯ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಹೀಗಾಗಿ ಕ್ಷೇತ್ರದ ಒಂಬತ್ತು ವಾರ್ಡ್ಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಜನರ ಜೊತೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.