ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗರ್ಡರ್‌ ಕಾಮಗಾರಿ: 8 ರೈಲುಗಳ ಸಂಚಾರ ರದ್ದು

Published 22 ಜುಲೈ 2024, 16:17 IST
Last Updated 22 ಜುಲೈ 2024, 16:17 IST
ಅಕ್ಷರ ಗಾತ್ರ

ಬೆಂಗಳೂರು: ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ಮಧ್ಯದ ಲೆವೆಲ್ ಕ್ರಾಸಿಂಗ್ -64ರ ರಸ್ತೆ ಕೆಳಸೇತುವೆಗೆ ತಾತ್ಕಾಲಿಕ ಗರ್ಡರ್ ಅಳವಡಿಸುವ ಮತ್ತು ತೆಗೆದುಹಾಕುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್‌ 8 ಮತ್ತು 15ರಂದು 8 ರೈಲುಗಳ ಸಂಚಾರ ರದ್ದುಗೊಳ್ಳಲಿದೆ. ಹಲವು ರೈಲುಗಳ ಸಂಚಾರ ಭಾಗಶಃ ರದ್ದು, ಮಾರ್ಗ ಬದಲಾವಣೆಯಾಗಲಿದೆ.

ತುಮಕೂರು-ಚಾಮರಾಜನಗರ ಪ್ಯಾಸೆಂಜರ್ ಸ್ಪೆಷಲ್, ಚಾಮರಾಜನಗರ-ಮೈಸೂರು  ಪ್ಯಾಸೆಂಜರ್ ಸ್ಪೆಷಲ್, ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್, ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್, ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ಸ್ಪೆಷಲ್, ಕೆಎಸ್‌ಆರ್‌ ಬೆಂಗಳೂರು-ತುಮುಕೂರು ಮೆಮು ಸ್ಪೆಷಲ್, ಯಶವಂತಪುರ-ಶಿವಮೊಗ್ಗ ಇಂಟರ್‌ಸಿಟಿ, ಶಿವಮೊಗ್ಗ-ಯಶವಂತಪುರ ಇಂಟರ್‌ಸಿಟಿ ರೈಲುಗಳ ಸಂಚಾರ ರದ್ದಾಗಲಿದೆ.

ಭಾಗಶಃ ರದ್ದು: ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ಮತ್ತು ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ರೈಲುಗಳ ಸಂಚಾರ ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದಾಗಲಿದೆ.

ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ಮಧ್ಯೆ ಭಾಗಶಃ ರದ್ದುಗೊಳ್ಳಲಿದೆ. ಧಾರವಾಡ-ಕೆಎಸ್‌ಆರ್ ಬೆಂಗಳೂರು ಸಿದ್ದಗಂಗಾ ಡೈಲಿ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಕೆಎಸ್‌ಆರ್ ಬೆಂಗಳೂರು-ಅರಸಿಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.

ಮಾರ್ಗ ಬದಲಾವಣೆ: ಆ.7 ಮತ್ತು 14ರಂದು ವಾಸ್ಕೋ ಡ ಗಾಮಾ-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಆ. 8 ಮತ್ತು 15 ರಂದು ಮೈಸೂರು-ವಾರಾಣಸಿ ಸೂಪರ್‌ಫಾಸ್ಟ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಯಶವಂತಪುರ-ಜೈಪುರ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಮೈಸೂರು-ಉದಯಪುರ ಸಿಟಿ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ನಿಯಂತ್ರಣ: ಆ. 6 ಮತ್ತು 13 ರಂದು ಬಿಕಾನೇರ್-ಯಶವಂತಪುರ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ ಎರಡೂವರೆ ಗಂಟೆ ನಿಯಂತ್ರಿಸಲಾಗುತ್ತದೆ. 

ಆ. 8 ಮತ್ತು 15 ರಂದು ಯಶವಂತಪುರ-ಹಜರತ್ ನಿಜಾಮುದ್ದೀನ್ ರೈಲನ್ನು ಮಾರ್ಗ ಮಧ್ಯೆ 50 ನಿಮಿಷ, ಕೆಎಸ್ಆರ್ ಬೆಂಗಳೂರು-ತಾಳಗುಪ್ಪ ಡೈಲಿ ಸೂಪರ್‌ಫಾಸ್ಟ್ ರೈಲನ್ನು 10 ನಿಮಿಷ, ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸ್‌ಪ್ರೆಸ್ ರೈಲನ್ನು 55 ನಿಮಿಷ, ಚಾಮರಾಜನಗರ-ತುಮಕೂರು ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ಮಾರ್ಗ ಮಧ್ಯೆ ಎರಡು ಗಂಟೆ ನಿಮಿಷ ನಿಯಂತ್ರಿಸಲಾಗುತ್ತದೆ.

ಯಶವಂತಪುರ-ವಾಸ್ಕೋಡಗಾಮಾ ಎಕ್ಸ್‌ಪ್ರೆಸ್ ರೈಲು ಯಶವಂತಪುರದಿಂದ ಒಂದು ಗಂಟೆ ತಡವಾಗಿ ಹೊರಡಲಿದೆ. ಆ.14ರಂದು ತುಮಕೂರು-ಶಿವಮೊಗ್ಗ ಮೆಮು ಸ್ಪೆಷಲ್ ರೈಲು ತುಮಕೂರಿನಿಂದ 85 ನಿಮಿಷ ತಡವಾಗಿ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT