ಬೆಂಗಳೂರು: ಪ್ರಿಯಕರನ ಜತೆಗಿರುವ ಖಾಸಗಿ ವಿಡಿಯೊ ಬಿಡುಗಡೆ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿ ಸ್ನೇಹಿತೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಆರ್.ಟಿ.ನಗರ ನಿವಾಸಿ ಅರಾಫತ್ ಎಂಬಾತನನ್ನು ಬಂಧಿಸಿ, ₹ 15 ಲಕ್ಷ ಮೌಲ್ಯದ 264 ಗ್ರಾಂ. ತೂಕದ ಚಿನ್ನಾಭರಣ ವಪಡಿಸಿಕೊಂಡಿದ್ದಾರೆ.

‘ಜಯನಗರದ ನಿವಾಸಿಯಾದ ಯುವತಿ, ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬಾತನ ಜತೆ ಸಲುಗೆಯಿಂದ ಇದ್ದಳು. ಡ್ಯಾನಿಶ್ ಸ್ನೇಹಿತ ಅರಾಫತ್ , ಯುವತಿಗೂ ಪರಿಚಿತ. ಈ ಮಧ್ಯೆ ಯುವತಿ ಹಾಗೂ ಡ್ಯಾನಿಶ್ ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿ, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆ ಇರುವ ಖಾಸಗಿ ವಿಡಿಯೊ ಹಾಗೂ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿನ ಚಿನ್ನಾಭರಣ ತಂದು ಕೊಡದಿದ್ದರೆ ವಿಡಿಯೊ ಹರಿಯ ಬಿಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಚಿನ್ನಾಭರಣ ನಾಪತ್ತೆ ಸಂಬಂಧ ಮಗಳ ಮೇಲೆಯೇ ಪೋಷಕರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯಾಂಶ ಗೊತ್ತಾಗಿದೆ.

‘ಖಾಸಗಿ ವಿಡಿಯೊ ಬಿಡುಗಡೆ ಮಾಡುವುದಾಗಿ ಬೆದರಿಸಿ ಚಿನ್ನಾಭರಣ ಕೊಡುವಂತೆ ಅರಾಫತ್ ಒತ್ತಾಯಿಸಿದ್ದ. ಒತ್ತಡಕ್ಕೆ ಮಣಿದು ಹಂತ, ಹಂತವಾಗಿ ಚಿನ್ನಾಭರಣ ನೀಡಿದ್ದೆ’ ಎಂದು ವಿಚಾರಣೆ ವೇಳೆ ತಿಳಿಸಿದ್ದಾಳೆ. ಈ ಸಂಬಂಧ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಯುವತಿಯ ಖಾಸಗಿ ವಿಡಿಯೊ ಇರುವುದಾಗಿ ಸುಳ್ಳು ಹೇಳಿ ಚಿನ್ನಾಭರಣ ಸುಲಿಗೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.