ನೆಲಮಂಗಲ: ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಬೆಂಗಳೂರು ಉತ್ತರ ತಾಲ್ಲೂಕಿನ ದೊಂಬರಹಳ್ಳಿಯಲ್ಲಿ ಮಂಗಳವಾರ ರಾತ್ರಿ ಪಿಸ್ತೂಲ್ ತೋರಿಸಿ ಆಭರಣ ಮಳಿಗೆಯಲ್ಲಿ ಚಿನ್ನಾಭರಣ ದೋಚಲಾಗಿದೆ.

ಬೈಕ್ನಲ್ಲಿ ಬಂದ ಇಬ್ಬರು ಪದಮ್ ಜ್ಯೂವೆಲರ್ಸ್ ಅಂಡ್ ಬ್ಯಾಂಕರ್ಸ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಸಿನಿಮೀಯ ಶೈಲಿಯಲ್ಲಿ ಚಿನ್ನಾಭರಣ ತುಂಬಿಕೊಂಡು ಪರಾರಿಯಾಗಿದ್ದಾರೆ.

ಮಾರುವೇಷದಲ್ಲಿ ಬಂದ ಆರೋಪಿಗಳು ಕೇವಲ 30 ಸೆಕೆಂಡ್ಗಳಲ್ಲಿ ಅಂದಾಜು ₹50 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ ಎಂದು ದೂರು ನೀಡಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

‘ಮಳಿಗೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯನ್ನು ಪರಿಶೀಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.