ಬೆಂಗಳೂರು: ‘ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಮಹಿಳೆಯರ ಕುರಿತು ಸಮಾಜದ ದೃಷ್ಟಿಕೋನ ಬದಲಾಗಬೇಕಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪೊಲೀಸ್ ಇಲಾಖೆಯಲ್ಲಿರುವ ಮಾನವ ಕಳ್ಳ ಸಾಗಣೆ ನಿಷೇಧ ದಳಗಳಿಗೆ ನಿರ್ಭಯ ಯೋಜನೆಯಡಿ 751 ಹೀರೊ ಗ್ಲಾಮರ್ಬೈಕ್ಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ‘ರಾಜ್ಯ ಮಹಿಳೆಯರಿಗೆ ಅತ್ಯಂತ ಸುರಕ್ಷಿತವಾಗಿದೆ’ ಎಂದರು.

‘ಮಹಿಳೆಯರು ನಿರ್ಭೀತಿಯಿಂದ ಇರುವ ವಾತಾವರಣ ನಿರ್ಮಿಸಲು, ಮುಕ್ತ ಓಡಾಟ, ಸುರಕ್ಷತೆಗೆ ಕೇಂದ್ರ ಸರ್ಕಾರ ಸ್ಥಾಪಿಸಿದ ನಿರ್ಭಯ ಯೋಜನೆಯಡಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಈಗಾಗಲೇ ತೆಗೆದುಕೊಂಡಿದೆ. ರಾಜ್ಯದ 700 ಪೊಲೀಸ್ ಠಾಣೆಗಳಲ್ಲಿ ಸಹಾಯವಾಣಿ ಆರಂಭಿಸಲು ಕೇಂದ್ರ ಸರ್ಕಾರ ₹ 7 ಕೋಟಿ ನೀಡಿದೆ’ ಎಂದೂ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.