ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರು ನಗರದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡಿ ಅವರನ್ನು
ಸನ್ಮಾನಿಸಲಿದ್ದಾರೆ.

ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನವಾದ ಆಗಸ್ಟ್ 9 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮಲ್ಲೇಶ್ವರ ಬಡಾವಣೆಯಲ್ಲಿರುವ ವಿ.ನಾಗಭೂಷಣ ರಾವ್ ಅವರ ಮನೆಗೆ ತೆರಳಿ ಗೌರವಿಸಲಿದ್ದು, ಅದೇ ದಿನ ಬೆಳಿಗ್ಗೆ 11 ಗಂಟೆಗೆ ಹಲಸೂರು ಬಡಾವಣೆಯಲ್ಲಿರುವ ಆರ್.ನಾರಾಯಣಪ್ಪ ಅವರ ಮನೆಗೆ ತೆರಳಿ
ಸನ್ಮಾನಿಸಲಿದ್ದಾರೆ.

ಸ್ವಾತಂತ್ರ್ಯಕ್ಕೆ ಶ್ರಮಿಸಿದ ಇನ್ನುಳಿದ ಸ್ವಾತಂತ್ರ್ಯಹೋರಾಟಗಾರರನ್ನು ಅವರ ಮನೆಗಳಿಗೇ ತೆರಳಿ ಜಿಲ್ಲಾಡಳಿತದ ಮೂಲಕ ಅವರ ಮನೆಗಳಲ್ಲೇ ಸನ್ಮಾನಿಸಲು ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರುತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.