ಕೆಂಗೇರಿ: ಡಾ.ಬಿ.ಆರ್. ಅಂಬೇಡ್ಕರ್ ತಾಂತ್ರಿಕ ಕಾಲೇಜಿನ 11ನೇ ಘಟಿಕೋತ್ಸವದಲ್ಲಿ ವಿವಿಧ ವಿಭಾಗದ 800 ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಎಸ್. ವೀಣಾ ಎಂಟು ಚಿನ್ನದ ಪದಕ ಪಡೆದರು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷ ಟಿ.ಜಿ. ಸೀತಾರಾಮ್ ಮಾತನಾಡಿ, ‘ಕೃತಕ ಬುದ್ಧಿಮತ್ತೆ ತಾಂತ್ರಿಕತೆಯೊಂದಿಗೆ ಸೆಣಸಾಟ ನಡೆಸಬೇಕಾಗಿರುವ ಇಂದಿನ ವಿದ್ಯಾರ್ಥಿಗಳು ಪದವಿಯೊಂದಿಗೆ ಪ್ರಸ್ತುತ ಅಗತ್ಯಗಳನ್ನು ಪೂರೈಸುವ ಕೌಶಲ ಬೆಳೆಸಿಕೊಳ್ಳಬೇಕು. ಹೊಸ ಆವಿಷ್ಕಾರಗಳನ್ನು ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.

ಪಾಂಚಜನ್ಯ ವಿದ್ಯಾಪೀಠ ಕಲ್ಯಾಣದತ್ತಿ ಅಧ್ಯಕ್ಷ ಎಸ್. ಮರಿಸ್ವಾಮಿ, ಕಲ್ಯಾಣದತ್ತಿ ಕಾರ್ಯದರ್ಶಿ ಎಸ್. ಶಿವಮಲ್ಲು, ಖಜಾಂಜಿ ಎಂ.ಮಹದೇವ, ಶಾಸಕ ಎ.ಆರ್. ಕೃಷ್ಣಮೂರ್ತಿ, ಪ್ರಾಂಶುಪಾಲ ಸಿ.ನಂಜುಂಡಸ್ವಾಮಿ, ಉಪಪ್ರಾಂಶುಪಾಲ ಸಿದ್ದರಾಜು, ಪಟ್ನಾಯಕ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.