ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಬಂಡಿಕೊಡಿಗೇಹಳ್ಳಿ ಗ್ರಾಮಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಎನ್.ಪವಿತ್ರ ಸುಬ್ರಮಣಿ ಹಾಗೂ ಉಪಾಧ್ಯಕ್ಷರಾಗಿ ಶ್ವೇತ ಚನ್ನಕೇಶವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದಿನ ಅಧ್ಯಕ್ಷೆ ಚೈತ್ರ ರಾಜಶೇಖರ್ ಮತ್ತು ಉಪಾಧ್ಯಕ್ಷ ಬಿ.ಕೆ.ಮಂಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗಾಗಿ ಚುನಾವಣಾ ಪ್ರಕ್ರಿಯೆ ನಡೆಯಿತು.

ಒಟ್ಟು 26 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಪವಿತ್ರ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ಶ್ವೇತಾ ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ಗೌಡ, ಬಿಜೆಪಿ ಹಿರಿಯ ಮುಖಂಡ ಪಿ.ಕೆ.ರಾಜಗೋಪಾಲ್, ಬ್ಯಾಟರಾಯನಪುರ ಗ್ರಾಮಾಂತರ ಮಂಡಲದ ಅಧ್ಯಕ್ಷ ಹನುಮಂತುಗೌಡ, ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷರಾದ ಜನಾರ್ದನ.ಪಿ, ಎನ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.