ಬೆಂಗಳೂರು: ಹಸಿರು ಕಟ್ಟಡದ ಉತ್ತೇಜನ ಯೋಜನೆಗಳನ್ನು ಅಳವಡಿಸಿಕೊಂಡಿರುವ ‘ನಮ್ಮ ಮೆಟ್ರೊ’ಗೆ ರಾಷ್ಟ್ರೀಯ ಮಟ್ಟದ ‘ಗ್ರೀನ್ ಚಾಂಪಿಯನ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮೆಟ್ರೊ ರೈಲು ಪ್ರಾಧಿಕಾರ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ‘ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್–2024’ ಸಮಾರಂಭದಲ್ಲಿ ಶುಕ್ರವಾರ ಬಿಎಂಆರ್ಸಿಎಲ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್, ನಿರ್ದೇಶಕ (ಯೋಜನೆ ಮತ್ತು ಪರಿಯೋಜನೆ) ಡಿ.ಆರ್.ಕೆ. ರೆಡ್ಡಿ, ಹಿರಿಯ ಅಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.

ನಮ್ಮ ಮೆಟ್ರೊ ವಿನ್ಯಾಸ, ನಿರ್ಮಾಣ, ಕಾರ್ಯಾಚರಣೆ, ನಿರ್ವಹಣೆ ಕ್ಷೇತ್ರಗಳಲ್ಲಿ ಹಸಿರು ಉತ್ತೇಜಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಯತ್ನಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.