ಬೆಂಗಳೂರು: ‘ತರಗತಿಗಳು ಆರಂಭವಾಗಿ ಮೂರು ತಿಂಗಳು ಕಳೆದರೂ ಗೌರವಧನ ನೀಡಿಲ್ಲ. ಕೂಡಲೇ ಗೌರವಧನ ಬಿಡುಗಡೆ ಮಾಡಬೇಕು’ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ಆಗ್ರಹಿಸಿದೆ.

‘ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದು, ತಿಂಗಳಿಗೆ ₹12 ಸಾವಿರ ಗೌರವ ಧನ ನೀಡಲಾಗುತ್ತಿದೆ. ಹೆಚ್ಚಿನ ಕಾರ್ಯಭಾರ, ಅಭದ್ರತೆ ನಡುವೆಯೂ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಸರಿಯಾಗಿ ಗೌರವಧನ ನೀಡುತ್ತಿಲ್ಲ. ಪರಿಣಾಮ ಜೀವನ ನಡೆಸುವುದೇ ಕಷ್ಟವಾಗಿದೆ. ಸರ್ಕಾರ ಹಾಗೂ ಪದವಿ ಪೂರ್ವ ಇಲಾಖೆ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಪದ್ಮಪ್ರಭ ಇಂದ್ರ, ಕಾರ್ಯದರ್ಶಿ ರಾಜೇಶ್ ಭಟ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.