ಬೆಂಗಳೂರು: ಸಮುದಾಯ ಪ್ರಾಣಿಗಳಿಗೆ ಆಹಾರ ನೀಡುವಾಗ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ಬಿಡುಗಡೆ ಮಾಡಿದೆ.

ನಾಯಿ, ಬೆಕ್ಕುಗಳಿಗೆ ಆಹಾರ ನೀಡುವಾಗ ಅಂತರವನ್ನು ಕಾಪಾಡಿಕೊಳ್ಳಬೇಕು. ನಾಯಿ, ಬೆಕ್ಕುಗಳು ಆಹಾರಕ್ಕಾಗಿ ಆಕ್ರಮಣ ಮಾಡದಂತೆ ನೋಡಿಕೊಳ್ಳಲು ಸಾಧ್ಯವಾದರೆ ಮಾತ್ರ ಸಾರ್ವಜನಿಕರು ಅವುಗಳಿಗೆ ಆಹಾರ ನೀಡಲು ಮುಂದಾಗಬೇಕು ಎಂದು ಸಲಹೆ ನೀಡಿದೆ.

ರಾತ್ರಿ 11.30ರ ನಂತರ, ಬೆಳಿಗ್ಗೆ 5ರ ಮೊದಲು ಆಹಾರ ನೀಡಬಾರದು. ಪ್ರಾಣಿಗಳಿಗೆ ಹಸಿ ಮಾಂಸ ಮತ್ತು ಹೆಚ್ಚಿನ ಸಕ್ಕರೆ ಅಂಶವಿರುವ ಬಿಸ್ಕತ್ತುಗಳನ್ನು ನೀಡಬಾರದು. ಈ ಆಹಾರ ತೀವ್ರ ಚುರುಕಿನ ಪ್ರಾಣಿಗಳನ್ನಾಗಿ ಮಾಡುತ್ತದೆ. ಆಹಾರವನ್ನು ಬೀದಿಯಲ್ಲಿ ಬಿಸಾಡಬಾರದು. ಇದರಿಂದ ಜನಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ನಾಯಿಗಳಿಗೆ ಆಹಾರ ಸಿಗುವುದನ್ನು ತಪ್ಪಿಸಬಹುದು. ನಿಗದಿತ ಸ್ಥಳದಲ್ಲಿ ಮಾತ್ರ ಆಹಾರ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮಾಲೀಕರು ತಮ್ಮ ಒಡೆತನದ ಪ್ರಾಣಿಗಳಿಗೆ ನೋವು ಉಂಟು ಮಾಡುವ, ಅಸ್ವಸ್ಥಗೊಳಿಸುವ ಕೆಲಸ ಮಾಡದಂತೆ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ಸ್ ಮತ್ತು ಅಪಾರ್ಟ್ಮೆಂಟ್ ಮಾಲೀಕರಿಗೆ ಬೈ–ಲಾ ರೂಪಿಸಬೇಕು. ಪ್ರಾಣಿಗಳ ಸಂರಕ್ಷಣೆಗೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಪಾಲಿಸಬೇಕು. ಸಾರ್ವಜನಿಕ ಪ್ರದೇಶದಲ್ಲಿ ಸಾಕು ಪ್ರಾಣಿಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ.

ಪ್ರಾಣಿಗಳನ್ನು ಸಾಕುವುದನ್ನು ನಿಷೇಧಿಸಲು ಸಾಧ್ಯವಿಲ್ಲ. ಆದರೆ, ಆ ಪ್ರಾಣಿಗಳಿಂದ ನಾಗರಿಕರಿಗೆ, ಪರಿಸರಕ್ಕೆ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಸಾಕು ಪ್ರಾಣಿಗಳನ್ನು ಸ್ವಚ್ಛವಾಗಿಡಬೇಕು. ಜಂತುಹುಳು ನಿರೋಧಕ, ಲಸಿಕೆ ಮತ್ತು ಸಂತಾನಹರಣ ಮಾಡಬೇಕು. ಆ ಮೂಲಕ ಸಾಕುಪ್ರಾಣಿಗಳ ಮಾಲೀಕರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.