ಬೆಂಗಳೂರು: ಐಎಎಸ್ ಹಾಗೂ ಐಪಿಎಸ್ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕೆಂಬ ಆಕಾಂಕ್ಷೆಗಳನ್ನು ಹೊಂದಿರುವವರಿಗೆ ವಿಷಯತಜ್ಞರಿಂದ ಅಗತ್ಯ ಮಾರ್ಗದರ್ಶನ ಒದಗಿಸಲು ಶನಿವಾರ (ಜ.11) ಬೆಳಿಗ್ಗೆ 10.30ಕ್ಕೆ ‘ಗೈಡಿಂಗ್ ಫೋರ್ಸ್’ ಕಾರ್ಯಕ್ರಮವನ್ನು ವಿಜಯನಗರದ ಬಂಟರ ಸಂಘದಲ್ಲಿ ಆಯೋಜಿಸಲಾಗಿದೆ.

‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ವಿಜಯನಗರದ ‘ಇನ್ಸೈಟ್ ಐಎಎಸ್’ ಸಂಸ್ಥೆಯ ಸಹಯೋಗವಿದೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಆರ್.ವೇಣುಗೋಪಾಲ್ ಹಾಗೂ ವೈಟ್ಫೀಲ್ಡ್ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ವಿಶೇಷ ಭಾಷಣ ಮಾಡಲಿದ್ದಾರೆ. ‘ಇನ್ಸೈಟ್ ಐಎಎಸ್’ ಸಂಸ್ಥೆಯ ನಿರ್ದೇಶಕ ವಿನಯ್ ಕುಮಾರ್ ಜಿ.ಬಿ. ಮತ್ತುವಿಷಯ ತಜ್ಞರು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.

ಐಎಎಸ್ ಹಾಗೂ ಐಪಿಎಸ್ ಪರೀಕ್ಷೆ ತೆಗೆದುಕೊಂಡಿರುವ ಮತ್ತು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, 1,500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಅಂದು ಬೆಳಿಗ್ಗೆ 9.30ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಪ್ರವೇಶ ಉಚಿತ.

ಗೊಂದಲಗಳು ನಿವಾರಣೆ: ಸಾಮಾನ್ಯವಾಗಿ ಐಎಎಸ್ ಹಾಗೂ ಐಪಿಎಸ್ ಪರೀಕ್ಷೆ ಎದುರಿಸುವವರಿಗೆ ವಿಷಯಗಳ ಆಯ್ಕೆಯಲ್ಲಿ ಗೊಂದಲಗಳು ಇರಲಿವೆ. ಈ ಬಗ್ಗೆ ಅಭ್ಯರ್ಥಿಗಳು ತಜ್ಞರನ್ನು ಪ್ರಶ್ನಿಸಿ, ಪರಿಹಾರ ಕಂಡುಕೊಳ್ಳಲೂ ಅವಕಾಶ ನೀಡಲಾಗುತ್ತದೆ. ಅದೇ ರೀತಿ, ಪರೀಕ್ಷೆಗೂ ಮುನ್ನ ಮಾಡಿಕೊಳ್ಳಬೇಕಾದ ತಯಾರಿ, ಪುನರಾವಲೋಕನ ವಿಧಾನ, ಸಮಯ ಹೊಂದಾಣಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ದೊರೆಯಲಿದೆ. ನೋಂದಣಿ ಹಾಗೂ ವಿವರಕ್ಕೆ ಮೊ.9448701058.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.