ಬೆಂಗಳೂರು: ‘ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಪತನವಾಗುವುದಿಲ್ಲ. ಯಾವುದೇ ಕಾರಣಕ್ಕೂ ಬಿಜೆಪಿಯ ‘ಆಪರೇಷನ್ ಕಮಲ’ದ ಆಮಿಷಕ್ಕೆ ಬಲಿಯಾಗಬಾರದು’ ಎಂದು ತಮ್ಮ ಪಕ್ಷದ ಶಾಸಕರಿಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ.

‘ತಾಜ್‌ವೆಸ್ಟ್ ಎಂಡ್’ ಹೋಟೆಲ್‌ನಲ್ಲಿ ಭಾನುವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಶಾಸಕರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದರು.

ಕಾಂಗ್ರೆಸ್ ಶಾಸಕ ರಮೇಶ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅಲ್ಲದೆ, ತಮ್ಮ ಜತೆ ಇನ್ನೂ ಕೆಲವು ಶಾಸಕರು ಇದ್ದಾರೆ ಎಂದು ಹೇಳಿದ್ದರಿಂದ, ಆತಂಕಕ್ಕೆ ಒಳಗಾಗಿರುವ ದೇವೇಗೌಡ ಅವರು ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಉದ್ದೇಶದಿಂದ ಈ ಸಭೆ ಕರೆದರು ಎಂದೂ ಮೂಲಗಳು ಹೇಳಿವೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ‘ಮೈತ್ರಿ ಸರ್ಕಾರ ಸುಭದ್ರವಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕವೂ ಸರ್ಕಾರಕ್ಕೆ ಆಪತ್ತು ಇಲ್ಲ. ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ಅಚಲವಾಗಿದೆ. ಬಿಜೆಪಿಯವರು ಮುಂದಿನ ದಿನ
ಗಳಲ್ಲಿಸರ್ಕಾರ ಉರುಳಿಸಲು ಆಮಿಷಗಳನ್ನು ಒಡ್ಡಬಹುದು. ಅದಕ್ಕೆ ಬಲಿಯಾಗದೇ ಒಗ್ಗಟ್ಟಾಗಿರಿ’ ಎಂದು ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.