ಬೆಂಗಳೂರು: ವಿಜಯನಗರ ಸಂಚಾರ ಠಾಣೆಯ ಹೆಡ್ ಕಾನ್ಸ್ಟೆಬಲ್ ನವೀನ್ ಕುಮಾರ್ (35) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಈ ಬಗ್ಗೆ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಾಸನದ ನವೀನ್ಕುಮಾರ್, ಹಲವು ವರ್ಷಗಳಿಂದ ವಿಜಯನಗರ ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ತಿಗುಪ್ಪೆಯಲ್ಲಿ ವಾಸವಿದ್ದರು. ಶನಿವಾರ ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ’ ಎಂದು ಪೊಲೀಸರು ಹೇಳಿದರು.

‘ಶುಕ್ರವಾರ ರಾತ್ರಿ ಕೆಲಸ ಮುಗಿಸಿ ನವೀನ್ ಮನೆಗೆ ಹೋಗಿದ್ದರು. ಶನಿವಾರ (ಆಗಸ್ಟ್ 5) ಬೆಳಿಗ್ಗೆ ಸಹೋದರ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಸಹೋದರ, ಮನೆ ಬಳಿ ಹೋಗಿ ನೋಡುವಂತೆ ಸಂಬಂಧಿಕರಿಗೆ ತಿಳಿಸಿದ್ದರು. ಸಂಬಂಧಿಕರು, ಮನೆಗೆ ಹೋಗಿ ನೋಡಿದಾಗಲೇ ಮೃತದೇಹ ಕಂಡಿತ್ತು. ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ’ ಎಂದು ತಿಳಿಸಿದರು.

ಮದುವೆ ನಿಶ್ಚಯ

‘ನವೀನ್ ಅವರಿಗೆ ಮದುವೆ ನಿಶ್ಚಯವಾಗಿತ್ತು. ಆಗಸ್ಟ್ ಕೊನೆಯ ವಾರದಲ್ಲಿ ಮದುವೆ ನಡೆಯಬೇಕಿತ್ತು. ಇದರ ನಡುವೆಯೇ ಅವರು ಮೃತಪಟ್ಟಿದ್ದು, ಸಾವಿನಲ್ಲಿ ಅನುಮಾನಗಳಿವೆ’ ಎಂದು ಪೊಲೀಸರು ಹೇಳಿದರು.

‘ಮದ್ಯದಲ್ಲಿ ವಿಷ ಬೆರೆಸಿ ಕುಡಿದು ನವೀನ್ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಕೌಟುಂಬಿಕ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೆ. ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.