ಬೆಂಗಳೂರು: ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಚಲನಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ವೈದ್ಯಕೀಯ ತೀವ್ರ ನಿಗಾ ಘಟಕದಲ್ಲಿ (ಎಂಐಸಿಯು) ಚಿಕಿತ್ಸೆ ಮುಂದುವರಿದಿದೆ ಎಂದು ಅಪೋಲೊ ಆಸ್ಪತ್ರೆ ತಿಳಿಸಿದೆ.

ಅಧಿಕ ರಕ್ತದೊತ್ತಡದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿಇದೇ 4ರಂದು ಅವರುಆಸ್ಪತ್ರೆಗೆ ದಾಖಲಾಗಿದ್ದರು.ತಲೆಯಲ್ಲಿ ರಕ್ತಸ್ರಾವ ಆಗಿರುವುದನ್ನು ಗುರುತಿಸಿದ ವೈದ್ಯರು, ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಐಸಿಯುನಲ್ಲಿ ಇರಿಸಿದ್ದರು.ವೆಂಟಿಲೇಟರ್ ಸಂಪರ್ಕದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.

ಅವರಿಗೆ ವೆಂಟಿಲೇಟರ್ ಸಂಪರ್ಕ ತೆಗೆಯಲಾಗಿದೆ. ಸದ್ಯ ಅವರುವೈದ್ಯಕೀಯ ಆಮ್ಲಜನಕ ಸಂಪರ್ಕದಲ್ಲಿದ್ದಾರೆ. ಫಿಸಿಯೋಥೆರಪಿಗೆ ಒಳಗಾಗಿರುವ ಅವರು,ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.