ಬೆಂಗಳೂರು: ‘ಮೂರು ತಿಂಗಳೊಳಗೆ 108 ಆರೋಗ್ಯ ಸೇವೆಗೆ ಹೊಸ ರೂಪ ನೀಡಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಆರೋಗ್ಯ ಸೌಧದಲ್ಲಿ ಅಧಿಕಾರಿಗಳ ಜತೆಗೆ ಶನಿವಾರ ಸಭೆ ನಡೆಸಿದ ಅವರು, ‘108’ ಆರೋಗ್ಯ ಸೇವೆ ಸುಧಾರಣೆಗೆ ಹಾಗೂ ಸಮಸ್ಯೆಗಳ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಸಭೆಗೂ ಮುನ್ನ ಇ.ಎಂ.ಆರ್.ಐ. ಗ್ರೀನ್ ಹೆಲ್ತ್ ಸರ್ವೀಸ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ಕಾಲ್ ಸೆಂಟರ್‌ನ ತಂತ್ರಜ್ಞಾನ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದ ಅವರು, ತಂತ್ರಜ್ಞಾನದಲ್ಲಿ ಬದಲಾವಣೆ ತರುವಂತೆ ಸೂಚಿಸಿದರು. ‘108’ ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಕರೆಗಳಿಗೆ ಸೂಕ್ತ ಸ್ಪಂದನೆ ಏಕೆ ಸಿಗುತ್ತಿಲ್ಲ ಎಂದು ಅಧಿಕಾರಿಗಳನ್ನ ಪ್ರಶ್ನಿಸಿ, ಆದಷ್ಟು ಬೇಗ ಸಮಸ್ಯೆಗಳನ್ನ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.

2017ರಿಂದ ‘108’ ಆರೋಗ್ಯವಾಹಿನಿ ಹೊಸ ಟೆಂಡರ್ ಕರೆದಿಲ್ಲ. ಈ ಹಿಂದೆ ಗುತ್ತಿಗೆ ಪಡೆದವರೇ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಗರಂ ಆದ ಅವರು, 108 ಆರೋಗ್ಯ ವಾಹಿನಿ ಸೇವೆ ಜನರಿಗೆ ಸಮರ್ಪಕವಾಗಿ ತಲುಪಿಸಲು ಹೆಚ್ಚು ಗಮನ ವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

‘ಮೂರು ತಿಂಗಳ ಒಳಗೆ ನನಗೆ ಉತ್ತಮ ಫಲಿತಾಂಶ ಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, ‘ಜನರು 108 ಆರೋಗ್ಯ ಸೇವೆ ಪಡೆಯಲು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾದರೆ ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.