ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಬುಧವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಕರಾವಳಿಯಲ್ಲಿ ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದ್ದು, ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕು. ಸಮುದ್ರದಲ್ಲಿ ಎತ್ತರದ ಅಲೆಗಳು ಏಳುವ ಮುನ್ಸೂಚನೆ ಇರುವುದರಿಂದ ದಡದಲ್ಲಿ ಮನೋರಂಜನೆ ಚಟುವಟಿಕೆ ನಡೆಸುವಾಗ ಜಾಗರೂಕವಾಗಿ ಇರಬೇಕು ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.