ಬೆಂಗಳೂರು: ‘ಆರು ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಿದ್ದು, ಈ ನಿಯಮವನ್ನು ಪಾಲಿಸಬೇಕು’ ಎಂದು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ನಗರದ ಶಾಲೆ– ಕಾಲೇಜು ಬಳಿ ಸಂಚಾರ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹಲವು ಪೋಷಕರು, ಮಕ್ಕಳನ್ನು ಹೆಲ್ಮೆಟ್ ಇಲ್ಲದೇ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾರೆ. ಇಂಥ ಪೋಷಕರಿಗೆ ಪೊಲೀಸರು, ‘6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಿದೆ. ಇಂದಿನಿಂದಲೇ ಮಕ್ಕಳಿಗೆ ಹೆಲ್ಮೆಟ್ ಹಾಕಿಸಿ’ ಎಂದು ಸೂಚನೆ ನೀಡುತ್ತಿದ್ದಾರೆ.

ಶಾಲೆ–ಕಾಲೇಜು ಬಳಿ ಹೆಲ್ಮೆಟ್ ರಹಿತ ಚಾಲನೆ, ಪರವಾನಗಿ ಇಲ್ಲದೇ ಚಾಲನೆ, ಪಾದಚಾರಿ ಮಾರ್ಗದಲ್ಲಿ ಸವಾರಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪೊಲೀಸರು ಪ್ರಕರಣಗಳನ್ನೂ ದಾಖಲಿಸಿ, ದಂಡ ವಸೂಲಿ ಮಾಡುತ್ತಿದ್ದಾರೆ.

ಕಾಯ್ದೆಯಲ್ಲಿ ಉಲ್ಲೇಖ: ‘6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಎಂಬುದು ಹೊಸ ನಿಯಮವಲ್ಲ. ಕಾಯ್ದೆಯಲ್ಲಿ ಮೊದಲಿನಿಂದಲೂ ಇದೆ. ಆದರೆ, ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ’ ಎಂದು ಸಂಚಾರ ವಿಭಾಗದ ಅಧಿಕಾರಿಯೊಬ್ಬರು ಹೇಳಿದರು.

‘ಬಹುತೇಕ ಅಪಘಾತಗಳಲ್ಲಿ ತಲೆಗೆ ಪೆಟ್ಟು ಬಿದ್ದು ಸವಾರರು ಮೃತಪಡುತ್ತಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಹೆಲ್ಮೆಟ್ ಹಾಕಿಸುವುದು ಒಳ್ಳೆಯದು. ಈ ಬಗ್ಗೆ ಪೋಷಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.