ಬೆಂಗಳೂರು: ಡಿ.ಜೆ.ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಬಂಧನದಲ್ಲಿದ್ದ ಮಾಜಿ ಮೇಯರ್ ಸಂಪತ್ರಾಜ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯದ ವಿಚಾರಣೆಗೆ ಸಹಕಾರ ನೀಡಬೇಕು, ಸಾಕ್ಷ್ಯ ನಾಶಕ್ಕೆ ಪ್ರಯತ್ನ ಮಾಡಬಾರದು ಮತ್ತು ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ನಗರ ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠ ಜಾಮೀನು ನೀಡಿದೆ.

ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದುಗೊಳಿಸುವಂತೆ ಸಿಸಿಬಿ ಪೊಲೀಸರು ಯಾವಾಗ ಬೇಕಿದ್ದರೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಪೀಠ ತಿಳಿಸಿದೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿಗೆ ಪಿತೂರಿ ಮಾಡಿದ್ದ ಆರೋಪದಲ್ಲಿ ಸಂಪತ್ ರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.