ಬೆಂಗಳೂರು: ಗೃಹ ಬಳಕೆದಾರರ ಹಕ್ಕು ಉಲ್ಲಂಘಿಸಿ ಬಿಲ್ಡರ್ಗಳು ಸಲ್ಲಿಸುತ್ತಿರುವ ದಾಖಲೆಗಳನ್ನು ಪರಿಗಣಿಸಿ ಉಪನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರು ಸಿಟಿ ಫ್ಲಾಟ್ ಮಾಲೀಕರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

‘ಘೋಷಣೆ ಪತ್ರ ಒಳಗೊಂಡ ದಾಖಲೆಗಳನ್ನು ನೋಂದಣಿಗೆ ಅವಕಾಶ ನೀಡಲಾಗುತ್ತಿದೆ. ಕೆಲವರು ಆಸ್ತಿ ಅಡಮಾನ ಇಟ್ಟು ಸಾಲ ಪಡೆದಿರುವ ಉದಾಹರಣೆಗಳೂ ಇವೆ. ನೋಂದಣಿಗೆ ಅವಕಾಶ ನೀಡುತ್ತಿರುವುದು ಅವ್ಯವಸ್ಥೆ ಮತ್ತು ವಿವಾದಗಳನ್ನು ಸೃಷ್ಟಿಸುತ್ತಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕೂಡ ಸ್ಪಷ್ಟೀಕರಣ ನೀಡುತ್ತಿಲ್ಲ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಫೆಬ್ರುವರಿ 12ರೊಳಗೆ ಆಕ್ಷೇಪಣೆ ಸಲ್ಲಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ನಿರ್ದೇಶನ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.