ಬೆಂಗಳೂರು: ‘ಕೇಂದ್ರಿಯ ಪಠ್ಯಕ್ರಮದ ಶಾಲೆಗಳಲ್ಲಿ ಬೋಧನಾ ಶುಲ್ಕದ ಪ್ರಮಾಣ ಇಳಿಸಬೇಕೆಂಬ ಬಲವಂತದ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಬಾರದು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಕಳೆದ ವರ್ಷಕ್ಕಿಂತ ಕಡಿಮೆ ಶುಲ್ಕ ಪಾವತಿಸುವ ಪೋಷಕರ ಮನವಿಗಳನ್ನೂ ಪರಿಗಣಿಸುವಂತೆ ಆಡಳಿತ ಮಂಡಳಿಗಳಿಗೆ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ ತಿಳಿಸಿತು. ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿತು.

ಶೇ 70ರಷ್ಟು ಶುಲ್ಕ ಮಾತ್ರ ಪಡೆಯಬೇಕು ಎಂದು 2021ರ ಜನವರಿ 29ರಂದು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಶಾಲಾ ಆಡಳಿತ ಮಂಡಳಿಗಳು ಮತ್ತು ಸಂಘಗಳು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದವು.

ಆನ್ಲೈನ್ ತರಗತಿಗಳು ನಡೆಯುತ್ತಿರುವ ಕಾರಣ ಬೋಧನಾ ವೆಚ್ಚ ಹೆಚ್ಚಾಗಿದೆ ಎಂದು ಅರ್ಜಿದಾರರು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.