ಬೆಂಗಳೂರು: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬವನ್ನು ಸಂಭ್ರಮ–ಸಡಗರದಿಂದ ಆಚರಿಸಲು ನಗರದ ಜನತೆ ಸಿದ್ಧವಾಗಿದ್ದು, ಬುಧವಾರವೇ ಹೂವು ಮತ್ತು ಹಣ್ಣಿನ ಖರೀದಿ ಜೋರಾಗಿತ್ತು.

ನವರಾತ್ರಿ ಆಚರಣೆಯ ವೇಳೆ ಪ್ರತಿ ವರ್ಷ ಹೂವುಗಳ ದರ ಏರಿಕೆಯಾಗುತ್ತದೆ. ಆದರೆ, ಕೆಲ ದಿನಗಳ ಹಿಂದೆ ಹೂವಿನ ದರ ಕುಸಿದಿತ್ತು. ಹಬ್ಬದ ವೇಳೆಗೆ ಮತ್ತೆ ಹೂವಿನ ದರಗಳು ಹೆಚ್ಚಾಗಿದೆ.

ಎರಡು ವಾರಗಳವರೆಗೆ ಧಾರ್ಮಿಕ ಆಚರಣೆಗಳು ನಡೆಯುವುದರಿಂದ ಈ ಸಮಯದಲ್ಲಿ ಹೂವಿಗೆ ಹೆಚ್ಚಿನ ಬೇಡಿಕೆ ಇರುತ್ತದೆ ಎಂದು ಕೆ.ಆರ್. ಮಾರುಕಟ್ಟೆಯ ಹೂವಿನ ವ್ಯಾಪಾರಿಗಳು ತಿಳಿಸಿದರು.

‘ದಸರಾ ಹಬ್ಬದಲ್ಲಿ ಸೇವಂತಿಗೆ, ಕನಕಾಂಬರ, ಗುಲಾಬಿ ಹೂವುಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಆಯುಧ ಪೂಜೆ ದಿನ ವಾಹನಗಳು, ಕಚೇರಿ, ಮನೆಯಲ್ಲಿರುವ ವಸ್ತುಗಳನ್ನು ಅಲಂಕರಿಸಿ ಪೂಜೆ ಮಾಡಲಾಗುತ್ತದೆ. ವಾಹನಗಳ ಅಲಂಕಾರಕ್ಕೆ ಹೂವು ಹೆಚ್ಚಾಗಿ ಮಾರಾಟವಾಗುತ್ತದೆ. ಗುಣಮಟ್ಟದ ಹೂವಿಗೆ ಗ್ರಾಹಕರಿಂದ ಬೇಡಿಕೆ ಹೆಚ್ಚು. ಆಗ ಬೆಲೆಯೂ ಏರಿಕೆಯಾಗುವುದು ಸಾಮಾನ್ಯ’ ಎಂದು ಕೆ.ಆರ್.ಮಾರುಕಟ್ಟೆಯ ಹೂವಿನ ವರ್ತಕ ಸುರೇಶ್ ಮತ್ತು ರಾಜು ಮಾಹಿತಿ ನೀಡಿದರು.

‘ಪ್ರತಿ ಕೆ.ಜಿ. ಕನಕಾಂಬರ ₹2000, ಮಲ್ಲಿಗೆ ₹800, ಗುಲಾಬಿ ₹400 ರಂತೆ ಮಾರಾಟವಾಗುತ್ತಿದೆ. ಗುರುವಾರ ಹೂವಿನ ದರಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

ಆಯುಧ ಪೂಜೆಯ ದಿನ ಮನೆ, ವಾಹನ, ಅಂಗಡಿ, ಕಾರ್ಖಾನೆ ಬಳಿ ಒಡೆಯುವ ಬೂದುಗುಂಬಳ ಕೆ.ಜಿಗೆ ₹40ರಂತೆ ಮತ್ತು ಗಾತ್ರದ ಆಧಾರದ ಮೇಲೆ ಒಂದಕ್ಕೆ ₹100–₹200ರಂತೆ ಮಾರಾಟವಾಗಿದೆ.

ನಗರದ ಕೆ.ಆರ್. ಮಾರುಕಟ್ಟೆಗೆ, ಯಶವಂತಪುರ, ಬಸವನಗುಡಿ ಮಾರುಕಟ್ಟೆ ಪ್ರದೇಶಗಳು ಜನಜಂಗುಳಿಯಿಂದ ಕೂಡಿದ್ದವು. ತರಕಾರಿ, ದಿನಸಿ, ಅಲಂಕಾರಿಕ ವಸ್ತುಗಳು ಮತ್ತು ಪೂಜೆಗೆ ಬೇಕಾಗುವ ಬೂದುಗುಂಬಳ, ಬಾಳೆಕಂದು, ಎಲೆ, ತೆಂಗಿನಕಾಯಿ ಖರೀದಿ ಜೋರಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.