ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸುಸ್ತಿದಾರರಿಗೆ ಹಲವು ನೋಟಿಸ್ ನೀಡಿದ್ದರೂ ಬಾಕಿ ಪಾವತಿಸದ್ದರಿಂದ ಕಟ್ಟಡಗಳಿಗೆ ಬೀಗಮುದ್ರೆ ಹಾಕುವ ಕಾರ್ಯಾಚರಣೆಯನ್ನು ಬಿಬಿಎಂಪಿ ಆರಂಭಿಸಿದೆ.

ಬುಧವಾರ ಸಂಜೆಯ ವೇಳೆಗೆ ಎಂಟೂ ವಲಯದಲ್ಲಿ 115 ಕಟ್ಟಡಗಳಿಗೆ ಬೀಗ ಹಾಕಲಾಗಿದೆ. ಪೂರ್ವ ವಲಯದಲ್ಲಿ ಅತಿ ಹೆಚ್ಚು ಕಟ್ಟಡಗಳಿಗೆ (32) ಬೀಗಮುದ್ರೆ ಹಾಕಲಾಗಿದೆ. ಪಶ್ಚಿಮದಲ್ಲಿ 30, ರಾಜರಾಜೇಶ್ವರಿ ನಗರದಲ್ಲಿ 17, ದಕ್ಷಿಣದಲ್ಲಿ 13, ಯಲಹಂಕದಲ್ಲಿ ಎಂಟು ಹಾಗೂ ಬೊಮ್ಮನಹಳ್ಳಿ, ದಾಸರಹಳ್ಳಿ, ಮಹದೇವಪುರ ವಲಯಗಳಲ್ಲಿ ತಲಾ ಐದು ಕಟ್ಟಡಗಳಿಗೆ ಬೀಗ ಹಾಕಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಪೂರ್ವ ವಲಯ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗುತ್ತಿದೆ ಎಂದು ವಲಯ ಆಯುಕ್ತೆ ಸ್ನೇಹಲ್ ತಿಳಿಸಿದರು.

ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಮಿಟ್ಟಲ್ ಟವರ್ನಲ್ಲಿ ಆಸ್ತಿ ತೆರಿಗೆ ಪಾವತಿಸದ ಗೋಯಲ್ ಆಸ್ತಿಗೆ ಬುಧವಾರ ಬೀಗಮುದ್ರೆ ಹಾಕಲು ಮುಂದಾದಾಗ, ಆಸ್ತಿ ಮಾಲೀಕರು ಬಾಕಿಯಿದ್ದ ₹17,42,412 ತೆರಿಗೆಯನ್ನು ಕೂಡಲೇ ಪಾವತಿಸಿದರು ಎಂದು ಹೇಳಿದರು.

ವಿಭಾಗವಾರು ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸಮಯಾವಕಾಶವನ್ನು ನೀಡಿದ್ದರೂ ಆಸ್ತಿ ತೆರಿಗೆಯನ್ನು ಪಾವತಿಸಿರುವುದಿಲ್ಲ. ಆದ್ದರಿಂದ ಬೀಗಮುದ್ರೆ ಹಾಕಿ, ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪೂರ್ವ ವಲಯ ವ್ಯಾಪ್ತಿಯಲ್ಲಿ 2,418 ಪರಿಷ್ಕರಣೆ ಪ್ರಕರಣಗಳ ಆಸ್ತಿಗಳಿಂದ ಸುಮಾರು ₹66 ಕೋಟಿ ಆಸ್ತಿ ತೆರಿಗೆ ಬಾಕಿ ಇದೆ. 32,584 ಸುಸ್ತಿದಾರರಿಂದ ₹61.76 ಕೋಟಿ ಬಾಕಿ ಇದೆ. ಅಭಿಯಾನದ ಮೂಲಕ ಹಂತ-ಹಂತವಾಗಿ ಎಲ್ಲಾ ಆಸ್ತಿಗಳಿಂದ ಬಾಕಿ ಆಸ್ತಿ ತೆರಿಗೆ ಸಂಗ್ರಹಿಸಲಾಗುವುದೆಂದು ಹೇಳಿದರು.

ವಲಯ ಜಂಟಿ ಆಯುಕ್ತೆ ಸರೋಜಾ, ಕಂದಾಯ ಅಧಿಕಾರಿ ಪ್ರಕಾಶ್, ಸಹಾಯಕ ಕಂದಾಯ ಅಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.