ಬೆಂಗಳೂರು: ಬಡವರಿಗೆ, ದುರ್ಬಲರಿಗೆ, ಧ್ವನಿ ಇಲ್ಲದವರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಿದ್ದೇ ಆದರೆ ಸಂವಿಧಾನದ ಆಶಯವನ್ನು ನಿಜವಾಗಿ ಕಾರ್ಯರೂಪಕ್ಕೆ ತಂದಂತಾಗುತ್ತದೆ ಎಂದು ಹಿಮಾಚಲ ಪ್ರದೇಶ ಹೈಕೋರ್ಟ್ನನೂತನ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಬುಧವಾರ ಬೆಂಗಳೂರು ವಕೀಲರ ಸಂಘ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು, ಲೈಂಗಿಕ ಕಾರ್ಯಕರ್ತೆಯರು, ತೃತೀಯ ಲಿಂಗಿಗಳು ಸಹಿತ ಬಡ, ದುರ್ಬಲ ವರ್ಗದವರಿಗೆ ಒಂದಿಷ್ಟು ಧ್ವನಿಯಾಗುವ, ಅವರ ಕಷ್ಟಗಳಿಗೆ ಸ್ಪಂದಿಸುವ ಅವಕಾಶ ತಮಗೆ ದೊರೆತಿದೆ, ಲೋಕ ಅದಾಲತ್ ಅಭಿಯಾನವನ್ನು ಸಹ ದೊಡ್ಡ ಪ್ರಮಾಣದಲ್ಲಿ ಯಶಸ್ವಿಯಾಗಿ ನಡೆಸಿದ ತೃಪ್ತಿ ಇದೆ ಎಂದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾತನಾಡಿ, ಜನಸಾಮಾನ್ಯರಿಗೆ ನ್ಯಾಯ ದೊರಕಿಸುವ ಕೆಲಸ ಎಲ್ಲರಿಂದಲೂ ಆಗಬೇಕು ಎಂದರು.

ವಕೀಲರ ಮಾಸಾಶನ ಹೆಚ್ಚಳ ಸಹಿತಸಂಘದ ಬೇಡಿಕೆಗಳ ಬಗ್ಗೆಚರ್ಚಿಸಿ, ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ, ಅಡ್ವಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷಎ. ಪಿ. ರಂಗನಾಥ್, ಪ್ರಧಾನ ಕಾರ್ಯದರ್ಶಿ ಎ. ಎನ್. ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.