ಬೆಂಗಳೂರು: ನಗರದಲ್ಲಿ ವಾಹನಗಳ ಟೋಯಿಂಗ್ ವ್ಯವಸ್ಥೆಯನ್ನು ಪುನ ರಾರಂಭಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಬೆಂಗಳೂರಿನಲ್ಲಿ ಜನಸ್ನೇಹಿ ಮತ್ತು ಸುಗಮ ಪಾರ್ಕಿಂಗ್ ಪದ್ಧತಿ ಜಾರಿಗೊಳಿಸಲು ಸರ್ಕಾರ ಯೋಚಿಸಿದೆ. ಅದಕ್ಕೆ ಪೂರಕವಾಗಿ ಅಧಿಕಾರಿಗಳು ಹಾಗೂ ತಜ್ಞರ ಜತೆ ಚರ್ಚಿಸಲಾಗಿದೆ. ಅವರ ಸಲಹೆ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಅವರೊಂದಿಗೂ ಚರ್ಚಿ ಸಲಾಗಿದೆ. ಟೋಯಿಂಗ್ ಸಂಬಂ ಧಿಸಿದಂತೆ ಯಾವುದೇ ತೀರ್ಮಾನ ಅಂತಿಮವಾಗಿಲ್ಲ’ ಎಂದು ಹೇಳಿದ್ದಾರೆ.

‘ಹಿಂದಿನ ವ್ಯವಸ್ಥೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಮತ್ತೆ ಅದೇ ವ್ಯವಸ್ಥೆ ಜಾರಿಗೊಳಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.