ಬೆಂಗಳೂರು: ಮಧ್ಯಪ್ರದೇಶದ ಇಂದೋರ್‌ನಲ್ಲಿ ‘ಹನಿಟ್ರ್ಯಾಪ್ ಕಿಂಗ್‌ಪಿನ್’ ಎಂದೇ ಕರೆಯಲಾಗುತ್ತಿದ್ದ ಮಹಿಳೆಯನ್ನು ಚಿನ್ನಾಭರಣ ಕಳವು ಪ್ರಕರಣದಲ್ಲಿ ನಗರದ ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರತಿ ದಯಾಳ್ ಬಂಧಿತ ಆರೋಪಿ. ವಿಜಯವಾಡದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

‘ಒಂದು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಆರತಿ ಪಿಜಿಯಲ್ಲಿ ನೆಲೆಸಿದ್ದರು. ಈಕೆ ಸ್ನೇಹಿತೆಯ ಚಿನ್ನದ ಸರವನ್ನೇ ಕಳವು ಮಾಡಿದ್ದಳು. ಚಿನ್ನಾಭರಣ ಕಳವು ನಂತರ ಪಿ.ಜಿ ಖಾಲಿ ಮಾಡಿಕೊಂಡು ಪರಾರಿಯಾಗಿದ್ದಳು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆಕೆ ವಿರುದ್ಧ ಇಂದೋರ್‌ನ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ಗೊತ್ತಾಗಿದೆ. ಮಧ್ಯಪ್ರದೇಶ ಪೊಲೀಸರಿಗೂ ಮಾಹಿತಿ ನೀಡಲಾಗಿದೆ.’

‘ರಾಜಕೀಯ ನಾಯಕರಿಗೆ ಗಾಳ ಹಾಕಿ ಹನಿಟ್ರ್ಯಾಪ್ ನಡೆಸಿ ವಂಚಿಸುತ್ತಿದ್ದಳು. ಅಲ್ಲಿನ ಪುರಸಭೆಯ ಎಂಜಿನಿಯರ್‌ಗೆ ಹನಿಟ್ರ್ಯಾಪ್ಗೆ ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದಳು. 2019ರಲ್ಲಿ ಈಕೆಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನು ಮೇಲೆ ಹೊರಬಂದಿದ್ದಳು. ಪೊಲೀಸರು ಹುಡುಕಾಟ ಆರಂಭಿಸಿದ ಮೇಲೆ ಕರ್ನಾಟಕಕ್ಕೆ ಪರಾರಿಯಾಗಿದ್ದಳು. ಚೆನ್ನೈಗೂ ತೆರಳಿ ಅಲ್ಲಿನ ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲೂ ಶ್ರೀಮಂತ ಹುಡುಗಿಯರ ಸ್ನೇಹ ಸಂಪಾದಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದಳು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.