ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯಲ್ಲಿ 349ನೇ ರ್ಯಾಂಕ್ ಪಡೆದಿರುವ ಶಿಲ್ಪಶ್ರೀ ಆರ್. ಅವರನ್ನು ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಲಾಯಿತು.

ನಗರದ ಜಸ್ಮಾದೇವಿ ಮಂದಿರ ಕಲ್ಯಾಣ ಮಂಟಪದಲ್ಲಿ ನಡೆದ ಸಂಘದ 23ನೇ ವಾರ್ಷಿಕೋತ್ಸವ ಮತ್ತು 44ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.

ಹೈಸ್ಕೂಲ್ನಿಂದ ಉನ್ನತ ಶಿಕ್ಷಣದವರೆಗೆ ಉತ್ತಮ ಅಂಕ ಪಡೆದಿರುವ ಭೋವಿ ಸಮಾಜದ 442 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ವಾರ್ಷಿಕೋತ್ಸವದ ಅಂಗವಾಗಿ ಮಹಾಗಣಪತಿ ಹೋಮ, ದುರ್ಗಾ ಹೋಮ, ಕುಂಭಾಭಿಷೇಕ ಮಹೋತ್ಸವ, ಗೋಪೂಜೆ, ಮಂಟಪ ಪ್ರವೇಶ, ಗಣೇಶ ಪೂಜೆಗಳು ನಡೆದವು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.