ಬೆಂಗಳೂರು: ಹುಳಿಮಾವು ಕೆರೆ ಅನಾಹುತದಿಂದ ಮನೆ ಕಳೆದುಕೊಂಡ 319 ಬಡ ಕುಟುಂಬಗಳಿಗೆ ಪರಿಹಾರ ಧನವಾಗಿ ಕೂಡಲೇ ತಲಾ ₹ 50 ಸಾವಿರ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಹುಳಿಮಾವು ಕೆರೆ ಅನಾಹುತದಿಂದ ನೆಲೆ ಕಳೆದುಕೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಮಾತನಾಡಿದ ಅವರು, ಅನಾಹುತದಿಂದಾಗಿ ಒಟ್ಟು 630 ಮನೆಗಳು ಹಾನಿಗೊಳಗಾಗಿವೆ. ಈ ಪೈಕಿ ಬಡವರ ಮನೆಗಳು ಸಂಪೂರ್ಣ ನಾಶವಾಗಿವೆ. ನಿರಾಶ್ರಿತರ ಕೇಂದ್ರದಲ್ಲಿ ಸಂತ್ರಸ್ತರಿಗೆ ಊಟ ವಸತಿ ಸೌಲಭ್ಯಗಳು ಸೇರಿದಂತೆ ಎಲ್ಲ ರೀತಿಯ ನೆರವನ್ನು ಒದಗಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:ಒಡೆದ ಕೋಡಿ, ಬದುಕೆಲ್ಲಾ ರಾಡಿ | ಕೆಸರಿನ ದುರ್ನಾತ... ಬಸಿದೊಗೆದಷ್ಟೂ ನೀರು

ಹಾನಿಗೊಳಗಾಗಿರುವ ಪ್ರದೇಶದಲ್ಲಿ ರಸ್ತೆಗಳ ನಿರ್ಮಾಣ, ಕುಡಿಯುವ ನೀರು ಹಾಗು ಒಳಚರಂಡಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಸಂಬಂಧಪಟ್ಟ ಶಾಸಕರು, ಪಾಲಿಕೆ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮುಂದೆ ಈ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಹಾಗೂ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮಹಾಪೌರ ಎಂ.ಗೌತಮ್ ಕುಮಾರ್, ನಗರ ಪಾಲಿಕೆ ಸದಸ್ಯೆ ಭಾಗ್ಯಲಕ್ಷ್ಮಿ ಮುರಳಿ, ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಇನ್ನಷ್ಟು...

ಹುಳಿಮಾವು ಕೆರೆ ದಂಡೆ ಒಡೆದವರಾರು?

ಹುಳಿಮಾವು ಕೆರೆ ದಂಡೆ ಒಡೆದು ಹೊರ ನುಗ್ಗಿದ ನೀರು: 800 ಮನೆ ಜಲಾವೃತ

ಹುಳಿಮಾವು ಕೆರೆ ಕೋಡಿ ಒಡೆದು ಹರಿದ ನೀರು, ರಜೆ ಮೂಡ್ನಲ್ಲಿದ್ದವರಿಗೆ ನೀರಿನ ಶಾಕ್

ಹುಳಿಮಾವು ಕೆರೆ ಒಡೆದ ಪ್ರಕರಣ: ಲೋಕಾಯುಕ್ತ ಭೇಟಿ, ಅಧಿಕಾರಿಗಳಿಗೆ ತರಾಟೆ

ಕೋಡಿ ಮಟ್ಟ ತಗ್ಗಿಸಲು ಅನುಮತಿ ಕೋರಿದ್ದ ಎಂಜಿನಿಯರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.